ಯಲಹಂಕದ ಐಸಿಎಆರ್ ಸಂಸ್ಥೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪಿಎಂ ಕಿಸಾನ್ ಸಮ್ಮಾನ್‌ನ 21 ನೇ ಕಂತು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ 86,919 ರೈತರಿಗೆ ಒಟ್ಟು 17.38 ಕೋಟಿ ರೂ. ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 55,731 ರೈತರಿಗೆ 11.15 ಕೋಟಿ ರೂ.ನೆರವು ವರ್ಗಾವಣೆಯಾಗಿದೆ ಎಂದು ಮಾಹಿತಿ ನೀಡಿದರು. ನರೇಂದ್ರ ಮೋದಿ ಪ್ರಧಾನಮಂತ್ರಿಯಾದ ನಂತರ 2018-19 ರಿಂದ ಕಿಸಾನ್ ಸಮ್ಮಾನ್ ಯೋಜನೆ ಪ್ರಾರಂಭವಾಯಿತು. ಈವರೆಗೆ 9 ಕೋಟಿ ರೈತರಿಗೆ 3.91 ಲಕ್ಷ ಕೋಟಿ ರೂಪಾಯಿ ನೇರವಾಗಿ ಅಕೌಂಟ್‌ಗೆ ವರ್ಗಾವಣೆ ಮಾಡಲಾಗಿದೆ. ಈಗ 21 ನೇ ಕಂತಿನಲ್ಲಿ ಒಂದೇ ದಿನ 18,000 ಕೋಟಿ ರೂ. ವರ್ಗಾಯಿಸಲಾಗಿದೆ. ಈ ಪೈಕಿ ಕರ್ನಾಟಕದ ರೈತರಿಗೆ 850 ಕೋಟಿ ರೂ. ದೊರೆತಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದೆ, ಈ ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ಕೇಂದ್ರದ 6 ಸಾವಿರ ರೂ. ಜತೆಗೆ 4 ಸಾವಿರ ರೂ. ಸೇರಿಸಿ ಒಟ್ಟು 10 ಸಾವಿರ ರೂ. ನೀಡುತ್ತಿತ್ತು ಎಂದು ತಿಳಿಸಿದರು.