ಬಡ ವಿದ್ಯಾರ್ಥಿಗಳು ಪ್ರೋತ್ಸಾಹ ಧನವನ್ನು ಸದ್ಬಳಕೆ ಮಾಡಿಕೊಳ್ಳಬೇಕು: ಬೈರತಿ ಬಸವರಾಜು.

ಸಮಾಜ ಸೇವಕ ಕೆ.ಹೇಮಂತ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕ ಬೈರತಿ ಬಸವರಾಜ ಅವರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹ ಧನ ವಿತರಿಸಿದರು.
ಸಮಾಜ ಸೇವಕ ಕೆ.ಹೇಮಂತ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕ ಬೈರತಿ ಬಸವರಾಜ ಅವರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹ ಧನ ವಿತರಿಸಿದರು.
Published on
ಕೆ.ಆರ್.ಪುರ: ಬಡವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನೀಡುವ ಪ್ರೋತ್ಸಾಹಧನವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಬೈರತಿ ಬಸವರಾಜು ತಿಳಿಸಿದ್ದಾರೆ.
ಕೆ.ಆರ್.ಪುರದಲ್ಲಿ ಬಿಜೆಪಿ ಮುಖಂಡ ಕೆ.ಹೇಮಂತ್ ನೇತೃತ್ವದಲ್ಲಿ ಆಯೋಜಿಸಿದ್ದ ಹತ್ತನೇ ತರಗತಿಯ ಶೇ.90 ಹೆಚ್ಚು ಅಂಕಪಡೆದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಣವಂತರು ಸಮಾಜದಲ್ಲಿ ಸಾಕಷ್ಟು ಜನ ಇದ್ದಾರೆ. ಆದರೆ, ಉದಾರ ಮನಸ್ಸಿನಿಂದ ಈ ರೀತಿಯ ಮಾದರಿ ಕಾರ್ಯಕ್ರಮಗಳು ಮಾಡುವುದು ವಿರಳ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ನೆರವು ನೀಡುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ. ಬಡ ಮಕ್ಕಳು ಒಳ್ಳೆಯ ವಿದ್ಯಾವಂತರಾಗುವ ಮೂಲಕ ಉನ್ನತ ಸ್ಥಾನ ಅಲಂಕರಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.
ಹೇಮಂತ್ ಅವರ ಕುಟುಂಬ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು. ದೇವಸ್ಥಾನಗಳ ಅಭಿವೃದ್ಧಿಗೆ ದೇಣಿಗೆ, ಮಠ ಮಂದಿರ ಹಾಗೂ ಶಾಲೆ ಕಾಲೇಜು ನಿರ್ಮಾಣಕ್ಕೆ ಜಾಗ ನೀಡುವುದು. ಬಡವರ ಆರೋಗ್ಯ ಚಿಕಿತ್ಸೆಗೆ ಸಹಾಯ ಹಸ್ತ ಇನ್ನೂ ಮುಂತಾದ ಕಾರ್ಯಕ್ರಮಗಳನ್ನು ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಇದೇ ರೀತಿ ಮುಂದಿನ ದಿನಗಳಲ್ಲಿಯೂ ಬಡವರಿಗೆ ಸಹಾಯವಾಗುವಂತ ಕಾರ್ಯಕ್ರಮಗಳು ಹಮ್ಮಿಕೊಳ್ಳಲಿ ಎಂದು ಹೇಳಿದರು.
ಕೆ. ಹೇಮಂತ್ ಮಾತನಾಡಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಶೇ 90ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ₹ 10 ಸಾವಿರ, ಶೇ 95 ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ₹15 ಸಾವಿರ 82 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಗಿದೆ. ಅಲ್ಲದೇ 500 ಹೆಚ್ಚು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಬ್ಯಾಗ್ ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಈ ವೇಳೆ ಸಮಾಜಸೇವಕಿ ಕೆ.ಆರ್.ಸರಸ್ವತಮ್ಮ, ಮುಖಂಡರಾದ ವೇಣುಗೋಪಾಲ, ಗೀತಾ,ಗೌರಮ್ಮ, ಸಚ್ಚಿದಾನಂದ ಮೂರ್ತಿ, ಬಿ.ಎನ್.ಜಯಪ್ರಕಾಶ್, ಎಸ್.ಜಿ.ನಾಗರಾಜ್,ಎಸ್‌ಎಸ್ ಪ್ರಸಾದ್, ಅಮರಜ್ಯೋತಿ ಮೋಹನ್, ಮಂಜುಳಾದೇವಿ,ಶ್ರೀರಾಮುಲು ಉಮಾಶಂಕರ್, ಶಿವಪ್ಪ, ಗಿರೀಶ್ ಬಾಬು,ಕೆಸಿ.ಜಗದೀಶ್, ಮತ್ತಿತರರಿದ್ದರು.
ಸುದ್ದಿಚಿತ್ರ: ಸಮಾಜ ಸೇವಕ ಕೆ.ಹೇಮಂತ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕ ಬೈರತಿ ಬಸವರಾಜ ಅವರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹ ಧನ ವಿತರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net