ಕುಡಿಯುವ ನೀರು ಸಮಸ್ಯೆ ತ್ವರಿತ ಪರಿಹಾರ ಒದಗಿಸಲು ಸೂಚನೆ ನೀಡಲಾಗಿದೆ, ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಕುಡಿಯುವ ನೀರು ಸಮಸ್ಯೆ ಉಲ್ಬಣವಾಗಿದೆ. ಅಲ್ಲಿ ಪರ್ಯಾಯವಾಗಿ ಖಾಸಗಿ ಬೋರ್ವೆಲ್, ರೈತರ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಿ ಎಂದು ಉಸ್ತುವಾರಿ ಸಚಿವ ಕೆ,ಎಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವುದೇ ಗ್ರಾಮ, ನಗರ ವ್ಯಾಪ್ತಿಯಲ್ಲಿ ಕುಡಿಯಲು ನೀರಿಲ್ಲ ಎಂದು ವರದಿ ಬರಬಾರದು. ಪಂಚಾಯಿತಿ ಪಿಡಿಒಗಳು ಬೆಳಿಗ್ಗೆಯಿಂದ ಸಂಜೆ ವರೆಗೆ ಕೇಂದ್ರ ಸ್ಥಾನದಲ್ಲಿ ಇದ್ದು, ಕುಡಿಯುವ ನೀರು ಸಮಸ್ಯೆ ನಿರ್ವಹಣೆ ಮಾಡಬೇಕು ಎಂದರು. ಈಗಾಗಲೇ ಕುಡಿಯುವ ನೀರು ಸಮಸ್ಯೆ ಇರುವ ಜಾಗಗಳಲ್ಲಿ ಶೀಘ್ರ ಹೊಸ ಕೊಳವೆಬಾವಿಗಳನ್ನು ಕೊರೆಸಿ, ವಿದ್ಯುತ್ ಸಂಪರ್ಕ ಕಲ್ಪಿಸಿ ನೀರು ಪೂರೈಕೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು.