ಪ್ರಮುಖವಾಗಿ ಶೋಷಣೆ, ದೌರ್ಜನ್ಯ, ಜಮೀನಿನ ಖಾತೆ, ಪಹಣಿ, ಸ್ಮಶಾನ, ಸಮುದಾಯ ಭವನ, ಎಸ್‌ಸಿಎಸ್ಪಿ ಮತ್ತು ಟಿಎಸ್‌ಪಿ ಅನುದಾನ ಬಳಕೆ, ಅಕ್ರಮ ಮದ್ಯ ಮಾರಾಟ, ಪೊಲೀಸ್ ನಡವಳಿಕೆ, ಕಾಮಗಾರಿಗಳಿಗೆ ನಾಮಫಲಕ, ಆಶ್ರಯ ಯೋಜನೆ ಮುಂತಾದ ಸಮಸ್ಯೆಗಳ ಬಗ್ಗೆ ಸಮಾಜದ ಮುಖಂಡರು ತಿಳಿಸಿದ್ದಾರೆ. ಇವುಗಳನ್ನು ಆಯೋಗವು ಕುಲಂಕುಶವಾಗಿ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಡಾ.ಎಲ್.ಮೂರ್ತಿ ತಿಳಿಸಿದರು. ಎಲ್ಲ ಇಲಾಖೆಗಳಿಂದ ಜಿಲ್ಲೆಗೆ ಹಂಚಿಕೆಯಾಗಿರುವ ಅನುದಾನದ ಬಗ್ಗೆ ಮಾಹಿತಿ ಪಡೆದು, ವಿಸ್ತೃತವಾಗಿ ಚರ್ಚಿಸಿದರು. ಎಸ್‌ಸಿ, ಎಸ್‌ಟಿ ಸಮುದಾಯಗಳ ನಾಗರಿಕ ಹಕ್ಕುಗಳು, ಶಿಕ್ಷಣ ಹಾಗೂ ಅವರನ್ನು ಸಾಮಾಜಿಕವಾಗಿ ಸದೃಢರಾಗಿಸಲು ಅಧಿಕಾರಿಗಳು ಶ್ರಮವಹಿಸಬೇಕು ಎಂದು ನಿರ್ದೇಶಿಸಿದರು.