ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಶೇ. 20 ಸಿಲಿಂಡರ್‌ಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚನೆಗಳಂತೆ ಆಸ್ಪತ್ರೆ, ಶಾಲಾ, ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್‌ನಿಲ್ದಾಣಗಳ ಕ್ಯಾಂಟಿನ್‌ಗಳಿಗೆ ಪ್ರಮುಖ ದೇವಸ್ಥಾನಗಳಲ್ಲಿ ಪ್ರಸಾದ ವಿನಿಯೋಗ ಮಾಡಲು ಮತ್ತು ಸರ್ಕಾರಿ ಕಚೇರಿಗಳಲ್ಲಿ, ವೃದ್ದಾಶ್ರಮ,ಪ್ರಮುಖ ಖಾಸಗಿ ವಲಯದ ಕಚೇರಿಗಳಿಗೆ ಆದ್ಯತೆ ಮೇರೆಗೆ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳನ್ನು ವಿತರಿಸಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.