ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ತಲುಪಿಸಿ, ವೇದಿಕೆ ಮತ್ತು ಧ್ವಜ ಕಟ್ಟೆ ಅಲಂಕಾರವನ್ನು ಅಚ್ಚುಕಟ್ಟಾಗಿ ನೆರವೇರಿಸಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ವಸ್ತುಗಳನ್ನು ಬೆಳೆಸಬಾರದು, ಪಥ ಸಂಚಲನಕ್ಕೆ ಅಗತ್ಯ ಕ್ರಮ ವಹಿಸಿ ಎನ್‌ಎಸ್‌ಎಸ್, ಎನ್ ಸಿಸಿ, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳನ್ನು ಭಾಗವಹಿಸಲು ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲು ಮೂರು ದಿನಗಳ ಪೂರ್ವಾಭ್ಯಾಸ ಇರಲಿದೆ. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ, ಸಿಬ್ಬಂದಿಗೆ ಉಪಹಾರ, ಕುಡಿಯುವ ನೀರು ಒದಗಿಸಲು ಹಿಂದುಳಿದ, ಸಮಾಜ ಕಲ್ಯಾಣ, ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಭಾಗವಹಿಸಬೇಕು. ಜತೆಗೆ ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.