77ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಅನ್ಯ ರಾಷ್ಟ್ರಗಳು ಮೆಚ್ಚುವಂತೆ ಭಾರತ ಸಂವಿಧಾನ ರಚಿಸಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದದ್ದು, ನಾವೆಲ್ಲರೂ ಜೀವನದಲ್ಲಿ ಸಂವಿಧಾನದ ಪೀಠಿಕೆಯ ಆಶಯ ಅರಿತು ಪಾಲನೆ ಮಾಡಬೇಕು. ನಮ್ಮ ಸಂವಿಧಾನ ಚುನಾಯಿತ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅವಕಾಶ ನಮಗೆ ಕೊಟ್ಟಿದೆ ಎಂದರು. ಭಾರತ ಸಾಮಾಜಿಕ, ಆರ್ಥಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಸಾಕಷ್ಟು ಪ್ರಗತಿ ಕಂಡು ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಸಂವಿಧಾನದ ಪೀಠಿಕೆ ಬೋಧಿಸಿದರು.