ಪಿಆರ್‌ಇಡಿ ಇಂಜಿನಿಯರ್ ಹಾಗೂ ಯಲಿಯೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸರ್ವೆ ನಡೆಸಿದ್ದು, ಗೋಕರೆ ಗ್ರಾಮದ ಮುನೇಶ್ವರ ಸ್ವಾಮಿ ದೇವಸ್ಥಾನದಿಂದ ಟಿ ಅಗ್ರಹಾರ ಗ್ರಾಮದವರೆಗಿನ ಸುಮಾರು 2 ಕಿ.ಮೀ ಉದ್ದದ ರಸ್ತೆಯಲ್ಲಿ ಖಾಸಗಿಯವರು ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಗ್ರಾಪಂಗೆ ದೂರು ನೀಡಿದ್ದರು. ಇದರಿಂದ ಯಾವುದೇ ಸ್ಪಂದನೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಸಿಎಂ ಜನಸ್ಪಂದನಕ್ಕೂ ದೂರು ಸಲ್ಲಿಸಲಾಗಿತ್ತು. ಸಿಎಂ ಕಚೇರಿಯ ಆದೇಶದಂತೆ ಯಲಿಯೂರು ಗ್ರಾಪಂ ಸಿಬ್ಬಂದಿ ಹಾಗೂ ತಾಲೂಕು ಆಡಳಿತ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಮೇಲ್ನೋಟಕ್ಕೆ ರಸ್ತೆ ಒತ್ತುವರಿಯಾಗಿರುವುದು ಕಂಡುಬಂದಿರುವ ಬಗ್ಗೆ ತಾಪಂ ಇಒಗೆ ವರದಿ ಸಲ್ಲಿಸಿದ್ದರು.