ದೊಡ್ಡಬಳ್ಳಾಪುರ-ನೆಲಮಂಗಲ ಹೆದ್ದಾರಿಯಲ್ಲಿ ಕೆಲವು ಕಡೆಗಳಲ್ಲಿ ತೀಕ್ಷ್ಣ ತಿರುವುಗಳಿದ್ದು, ಎದುರು-ಬದುರು ಬರುವ ವಾಹನಗಳು ಮುಖಾಮುಖಿ ಡಿಕ್ಕಿಯಾಗುವ ಸಾಧ್ಯತೆಗಳು ಹೆಚ್ಚಿವೆ. ಈ ಹಿನ್ನೆಲೆಯಲ್ಲಿ ಇಂಥ ಸ್ಥಳಗಳಲ್ಲಿ ರಸ್ತೆ ವಿಸ್ತರಣೆ ಮಾಡಿ ತಿರುವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಚಿಂತನೆ ನಡೆಸಿದೆ. ಲೊಕೋಪಯೋಗಿ ಇಲಾಖೆ ಇಂಜಿನಿಯರ್ ಗಿರಿಗೌಡ ಹಾಗೂ ಇನ್ನಿತರ ಅಧಿಕಾರಿಗಳು ಹೆದ್ದಾರಿ ಪರಿಶೀಲನೆ ನಡೆಸಿ ಪ್ರಮುಖ ತಿರುಗಳನ್ನು ಗುರುತು ಮಾಡಿದ್ದಾರೆ ಇದರೊಂದಿಗೆ ಆರ್‌ಟಿಒ, ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಕಮಿಟಿ ರಚಿಸಿ ಈ ರಸ್ತೆಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿ ವರದಿ ಸಿದ್ದಪಡಿಸಲು ಮುಂದಾಗಿದೆ.