ಗಿಡ ಮರ ಬೆಳೆಸಿ ಅರಣ್ಯ ಉಳಿಸಿ

Sapling planting program launched
Sapling planting program launched
Published on
ಜಿಲ್ಲಾದ್ಯಂತ ವಿಶ್ವಪರಿಸರ ದಿನ ಆಚರಿಸಲಾಯಿತು. ದೇವನಹಳ್ಳಿಯಲ್ಲಿ ಸಚಿವ ಕೆ.ಎಚ್.ಮುನಿಯಪ್ಪ ಸಸಿಗಳನ್ನು ನೆಡುವ ಮೂಲಕ ಜಿಲ್ಲಾ ಮಟ್ಟದಲ್ಲಿ ಪರಿಸರ ದಿನ ಆಚರಣೆಗೆ ಚಾಲನೆ ನೀಡಿದರು. ವಿವಿಧ ಶಾಲಾ ಕಾಲೇಜುಗಳಲ್ಲಿ ಪರಿಸರ ದಿನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು. ಜಿಲ್ಲಾ ಅರಣ್ಯ ಇಲಾಖೆ ವತಿಯಿಂದ ರಸ್ತೆ ಬದಿಗಳಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪರಿಸರ ಸಮತೋಲನ ಕಾಪಾಡಲು ಪ್ರತಿಯೊಬ್ಬರು ಗಿಡ ಮರ ಬೆಳೆಸಿ ಅರಣ್ಯ ಉಳಿಸಿ ಎಂದು ದೇವನಹಳ್ಳಿ ಶಾಸಕ ಹಾಗೂ ಸಂಪುಟ ದರ್ಜೆ ಸಚಿವ ಕೆ.ಎಚ್.ಮುನಿಯಪ್ಪ ಕರೆ ನೀಡಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದೇವನಹಳ್ಳಿ ಟೌನ್‌ನಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶುಕ್ರವಾರ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಸುಮಾರು 40-50 ವರ್ಷದ ಹಿಂದೆ ಕಾಲಕಾಲಕ್ಕೆ ಮಳೆ ಆಗುತ್ತಿತ್ತು, ಅರಣ್ಯ ಪ್ರದೇಶ ಹೆಚ್ಚಾಗಿತ್ತು. ಜನಸಂಖ್ಯೆ 30 ರಿಂದ 35 ಕೋಟಿ ಇತ್ತು. ಈಗ ಭಾರತದ ಜನಸಂಖ್ಯೆ 150 ಕೋಟಿ ಆಗಿದೆ. ಕೈಗಾರಿಕೆಗಳು ಹೆಚ್ಚಾಗಿದೆ. ಅರಣ್ಯ ನಾಶವಾಗುತ್ತಿದೆ, ಪರಿಸರ ಅಸಮತೋಲನವಾಗುತ್ತಿದೆ ಈ ನಿಟ್ಟಿನಲ್ಲಿ ನಾವೆಲ್ಲರೂ ಎಚ್ಚೆತ್ತು ಪರಿಸರ ಉಳಿಸಿ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಹೇಳಿದರು.
ಜವಾಬ್ದಾರಿ ನಮ್ಮ ಮೇಲಿದೆ:
ಆಧುನೀಕರಣ, ಕೈಗಾರಿಕೀಕರಣ, ಜನಸಂಖ್ಯೆ ಬೆಳೆದಂತೆಲ್ಲ ಪರಿಸರ ನಾಶ ಆಗುತ್ತಿದೆ. ಮುಂದಿನ ಪೀಳಿಗೆಗೆ ಪರಿಸರ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಚಿವರು ತಿಳಿಸಿದರು. ಭೂಮಿ ಮೇಲೆ ಮೂರನೇ ಎರಡು ಭಾಗದಷ್ಟು ಪರಿಸರ ಇರಬೇಕು. ನಾವೆಲ್ಲರೂ ಗಿಡ, ಮರ ಬೆಳೆಸಿ ಪರಿಸರ ಉಳಿಸಬೇಕು. ಇದರಿಂದ ಪರಿಸರ ಸಮತೋಲನ ಕಾಪಾಡಲು ಸಾಧ್ಯ, ಮುಂದಿನ ದಿನಗಳಲ್ಲಿ ಪರಿಸರ ಸಂರಕ್ಷಣೆಗೆ ಸರ್ಕಾರವು ಅತಿ ಹೆಚ್ಚು ಗಿಡಗಳನ್ನು ಬೆಳೆಸಲು ಕ್ರಮಕೈಗೊಳ್ಳಲಿದೆ ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net