ಸಿರಿಧಾನ್ಯ ಸೇವನೆಯಿಂದ ಆರೋಗ್ಯಭಾಗ್ಯ

 ಸಚಿವ ಕೆ.ಎಚ್.ಮುನಿಯಪ್ಪ ಅಭಿಮತ
ಸಚಿವ ಕೆ.ಎಚ್.ಮುನಿಯಪ್ಪ ಅಭಿಮತ
Published on
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ನಮ್ಮ ಆರೋಗ್ಯವನ್ನು ಸಮತೋಲನದಿಂದ ಕಾಪಾಡಿಕೊಳ್ಳಲು ಸಾಂಪ್ರದಾಯಿಕ ಪದ್ಧತಿಯ ಸಿರಿಧಾನ್ಯಗಳ ಆಹಾರ ಸೇವನೆಗೆ ಮರಳಬೇಕಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ದಿನಂಪ್ರತಿ ನವಣೆ, ಸಜ್ಜೆ, ಉದ್ದು, ರಾಗಿ ಮತ್ತು ಜೋಳದಂತ ಸಿರಿಧಾನ್ಯ ಆಹಾರ ಸೇವನೆ ರೂಡಿಸಿಕೊಳ್ಳುವದು ಅಗತ್ಯವಾಗಿದೆ ಎಂದ ಸಚಿವರು ಆಧುನಿಕ ಜೀವನ ಶೈಲಿಯಿಂದ ಮುನುಷ್ಯನ ಆಯಸ್ಸು ಕ್ಷೀಣಿಸುತ್ತಿದೆ, ಈ ನಿಟ್ಟಿನತ್ತ ಜನರು ಯೋಚಿಸಬೇಕಿದೆ ಆಧುನಿಕ ಶೈಲಿಗೆ ಮಾರುಹೋಗದೆ ನಮ್ಮ ಸಾಂಪ್ರದಾಯಿತ ಪದ್ಧತಿ ಕಡೆಗೆ ಗಮನ ನೀಡಬೇಕಾಗಿದೆ ಎಂದು ಸಲಹೆ ನೀಡಿದರು.
100 ವರ್ಷ ಜೀವಿಸುತ್ತಿದ್ದರು:
ಭಾರತದಲ್ಲಿ ಹಿಂದಿನ ಕಾಲದಲ್ಲಿ ಪೂರ್ವಜರು 75 ಭಾಗದಷ್ಟು ಕೃಷಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಇಂದು ಈ ಪರಿಸ್ಥಿತಿ ತತ್ವಿರುದ್ಧವಾಗಿದೆ ಅಲ್ಲದೆ ಅವರು ಸಿರಿಧಾನ್ಯ ಪದಾರ್ಥ ಬೆಳೆಗೆ ಹೆಚ್ಚು ಗಮನ ನಿಡುತ್ತಿದ್ದರು. ಗುಣಮಟ್ಟದ ಆಹಾರ ಹಾಗೂ ಹಣ್ಣು-ಹಂಪಲು ಸೇವಿಸುತ್ತಾ, ಗಟ್ಟಿ ಶರೀರದಿಂದ 100 ವರ್ಷ ಜೀವಿಸುತ್ತಿದ್ದರು. ಅಂದಿನ ಆಹಾರ ಪದ್ಧತಿಯಿಂದ ಸಮತೋಲನ ಜೀವನ ನಡೆಸಲು ಸಾಧ್ಯವಾಗುತ್ತಿತ್ತು. ಆದರೆ ಕಾಲ ಬದಲಾದಂತೆ ಆಧುನಿಕ ಜೀವನ ಶೈಲಿಗೆ ಹೊಂದಿಕೊಳ್ಳುತ್ತಿರುವುದರಿಂದ ಮನುಷ್ಯನ ಸರಾಸರಿ ಆಯುಸ್ಸು ಸಹ ಕ್ಷೀಣಿಸುತ್ತಿದೆ. ಚಿಕ್ಕ ವಯಸ್ಸಿಗೆ ಹಲವು ಕಾಯಿಲೆಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಚಿವರು ಹೇಳಿದರು. ಇಂದಿನ ಪೀಳಿಗೆ ಫಾಸ್ಟ್‌ಫುಡ್ ಸೇವನೆ ಮೊರೆ ಹೋಗುತ್ತಿದ್ದಾರೆ. ಇದೆ ಆನಾರೋಗ್ಯಕ್ಕೆ ದಾರಿ ಮಾಡಿಕೊಡುತ್ತಿದೆ. ಇಂದಿನ ಯುವಪೀಳಿಗೆಗೆ ಸಿರಿಧಾನ್ಯಗಳ ಆಹಾರ ಸೇವನೆ ಬಗ್ಗೆ ಜಾಗೃತಿ ಅತ್ಯವಶ್ಯವಾಗಿದೆ. ತಿನ್ನಲು ಪಾಸ್ಟ್‌ಪುಡ್ ಆಹಾರಗಳು ರುಚಿ ರುಚಿಯಾಗಿದ್ದರೂ ಆರೋಗ್ಯ ಮೇಲೆ ಪ್ರಭಾವ ಬೀರುತ್ತದೆ ಈ ಬಗ್ಗೆ ಯುವಪೀಳಿಗೆ ಚಿಂತಿಸಬೇಕಿದೆ ಎಂದು ಸಚಿವರು ಕಿವಿಮಾತು ಹೇಳಿದರು.
ಬರ್ಡ್‌ಡೆಗೆ ಸಿರಿಧಾನ್ಯ ಬಳಸಿ:
ಹುಟ್ಟುಹಬ್ಬ ಆಚರಣೆ ಸಮಯದಲ್ಲಿ ಮಕ್ಕಳಿಗೆ ಕೇಕ್ ಬದಲು ಸಿರಿಧಾನ್ಯ, ಹಾಲು, ರಾಗಿ ಮೀಲ್ಟ್ನಲ್ಲಿ ತಯಾರಿಸಿದಂತೆ ಆಹಾರ ನೀಡಬೇಕು ಈ ಬಗ್ಗೆ ಪಾಲಕರು ಪ್ರೋತ್ಸಾಹ ಮಾಡಬೇಕು. ಇದರಿಂದ ಮಕ್ಕಳ ರೋಗನಿರೋಧಕ ಶಕ್ತಿ ವೃದ್ಧಿಗೂ ಸಹಕಾರಿಯಾಗುತ್ತದೆ. ಇದರ ಅರಿವು ಮೂಡಿಸುವ ಜವಬ್ದಾರಿ ಪ್ರತಿ ಪಾಲಕರ ಮೇಲಿದೆ ಎಂದು ಸಚಿವರುಹೇಳಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಆರೋಗ್ಯ ವೃದ್ಧಿಸುವ ಸಿರಿಧಾನ್ಯಗಳಿಗೆ ಹೆಚ್ಚಿನ ಒತ್ತು ನೀಡಿ, ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹಿಸುತ್ತಿದೆ ಎಂದರು.
ದೇವನಹಳ್ಳಿ ಟೌನ್ ಕ್ರೀಡಾಂಗಣದಿಂದ ನಗರದ ವಿವಿಧ ರಸ್ತೆಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಸಿರಿಧಾನ್ಯ ಜಾಗೃತಿ ನಡಿಗೆ ನಡೆಯಿತು. ಸಚಿವರು ಹಸಿರು ನಿಶಾನೆ ತೋರಿಸುವ ಮೂಲಕ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಾಥಾಗೆ ಕೈಜೋಡಿಸಿದರು. ಸಿರಿಧಾನ್ಯ ಸೇವಿಸಿ ಆರೋಗ್ಯದಿಂದಿರಿ ೋಷವಾಕ್ಯದೊಡಗೆ ಸಿರಿಧಾನ್ಯದ ಕುರಿತು ಜಾಗೃತಿ ಮೂಡಿಸುವ ಪ್ರಯತ್ನ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net