

ವಿಜಯಪುರ : ಪಟ್ಟಣದಿಂದ ವಿವಿಧ ಭಾಗಗಳಿಗೆ ಸಂಚರಿಸುವ ಶಾಲಾ&ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವಿಜಯಪುರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಪಟ್ಟಣ ಸೇರಿ ಸುತ್ತಮುತ್ತಲಿನ ನೂರಾರು ಗ್ರಾಮಗಳಿಂದ ನಿತ್ಯ ಸಾವಿರಾರು ವಿದ್ಯಾರ್ಥಿಗಳು ಪ್ರಯಾಣಿಸುತ್ತಾರೆ. ಕೋಲಾರ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಬೆಂಗಳೂರು, ದೇವನಹಳ್ಳಿ, ಯಲಹಂಕ ಹಾಗೂ ದೊಡ್ಡಬಳ್ಳಾಪುರ ಮಾರ್ಗವಾಗಿ ತೆರಳುವ ವಿದ್ಯಾರ್ಥಿಗಳಿಗೆ ಪ್ರತಿದಿನ ಬಸ್ಗಳ ಅಭಾವ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬೆಳಗ್ಗೆ ಶಾಲಾ&ಕಾಲೇಜುಗಳಿಗೆ ಹೋಗಲು ಸಮಯಕ್ಕೆ ಸರಿಯಾಗಿ ಬಸ್ಗಳು ಬರುವುದಿಲ್ಲ. ಬರುವ ಕೆಲವೇ ಬಸ್ಗಳಲ್ಲಿ ನಿಲ್ಲಲು ಜಾಗವಿಲ್ಲದಷ್ಟು ಪ್ರಯಾಣಿಕರು ಕಿಕ್ಕಿರಿದು ತುಂಬಿರುತ್ತಾರೆ.
ಬಸ್ ಹತ್ತುವ ರಭಸದಲ್ಲಿ ಹಲವು ವಿದ್ಯಾರ್ಥಿಗಳು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆಗಳೂ ನಡೆದಿವೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಬಸ್ಪಾಸ್ ಮಾಡಿಸಿಕೊಂಡರೂ ಸೂಕ್ತ ಸಾರಿಗೆ ವ್ಯವಸ್ಥೆಯಿಲ್ಲದೆ ತರಗತಿಗಳಿಗೆ ತಡವಾಗಿ ತಲುಪುವಂತಾಗಿದೆ. ಹೆಚ್ಚುವರಿ ಬಸ್ಗಳಿಗೆ ಮನವಿ ಮಾಡಿದರೆ "ಕಲೆಕ್ಷನ್ ಆಗುವುದಿಲ್ಲ'ಎನ್ನುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅಧಿಕಾರಿಗಳು ಕೂಡಲೇ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಿಂದಾಗಿ ಬಸ್ ನಿಲ್ದಾಣದ ಸುತ್ತಮುತ್ತ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ಡಿಪೋ ಕಾಮಗಾರಿ ಪೂರ್ಣಗೊಳಿಸಿ: ಟೌನ್ ಬಿಜೆಪಿ ಅಧ್ಯಕ್ಷ ವೆಂಕಟೇಶ್ ಪ್ರಭು ಮಾತನಾಡಿ, ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅವಧಿಯಲ್ಲಿ ವಿಜಯಪುರದಲ್ಲಿ ಬಸ್ ಡಿಪೋ ನಿಮಾರ್ಣಕ್ಕೆ ಸರ್ಕಾರಿ ಜಾಗ ಮಂಜೂರಾಗಿತ್ತು. ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಆ ಜಾಗಕ್ಕೆ ಕಾಂಪೌಂಡ್ ಗೋಡೆ ನಿರ್ಮಿಸಿ ವರ್ಷಗಳೇ ಕಳೆದರೂ ಇದುವರೆಗೂ ಯಾವುದೇ ಪ್ರಗತಿಯಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರು ತಕ್ಷಣವೇ ನನೆಗುದಿಗೆ ಬಿದ್ದಿರುವ ಬಸ್ ಡಿಪೋ ನಿಮಾರ್ಣ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.
ಪೊಲೀಸ್ ಇನ್ಸ್ಪೆಕ್ಟರ್ ಮಧ್ಯಸ್ಥಿಕೆ&ತಾತ್ಕಾಲಿಕ ಶಮನ : ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ವಿಜಯಪುರ ಠಾಣೆ ಇನ್ಸ್ಪೆಕ್ಟರ್ ಲಕ್ಷಿ$್ಮನಾರಾಯಣ್, ಕೆಎಸ್ಆಸ್ಟಿಸಿ ಚಿಕ್ಕಬಳ್ಳಾಪುರ ಘಟಕದ ವ್ಯವಸ್ಥಾಪಕರೊಂದಿಗೆ (ಡಿಎಂ) ದೂರವಾಣಿ ಮೂಲಕ ಪ್ರತಿಭಟನಾಕಾರರೊಂದಿಗೆ ಮಾತನಾಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಬೆಳಗ್ಗೆ 7ರಿಂದ 9 ಗಂಟೆ ಹಾಗೂ ಸಂಜೆ 4ರಿಂದ 6 ಗಂಟೆಗೆ ಹೆಚ್ಚುವರಿ 2 ಬಸ್ಗಳನ್ನು ಕಡ್ಡಾಯವಾಗಿ ಕಾರ್ಯಾಚರಣೆಗೆ ಇಳಿಸಲು ಮನವಿ ಮಾಡಿದರು. ಸಾರಿಗೆ ಇಲಾಖೆಯ ಅಧಿಕಾರಿಗಳಿಂದ ಭರವಸೆ ದೊರೆತ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ಹೆಚ್ಚುವರಿ ಬಸ್ಗಳನ್ನು ಬಿಡದಿದ್ದರೇ ಮುಂದಿನ ದಿನಗಳಲ್ಲಿ ಎಲ್ಲ ಬಸ್ಗಳನ್ನು ತಡೆದು ಮತ್ತೆ ಹೋರಾಟ ರೂಪಿಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.