ದೇವನಹಳ್ಳಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಶಿಕ್ಷಕರು ಪ್ರತಿ ತಾಲೂಕಿನಿಂದ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಒಬ್ಬರು, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಒಂದು ಹಾಗೂ ಪ್ರೌಢಶಾಲಾ ವಿಭಾಗದಿಂದ ಒಂದು ಒಟ್ಟಾರೆ ಒಂದು ತಾಲೂಕಿನಿಂದ ಮೂರು ಶಿಕ್ಷಕರನ್ನು ಗುರುತಿಸಿ ಸನ್ಮಾನಿಸಲಾಗುವುದು. ಜತೆಗೆ 2025-26ನೇ ಸಾಲಿನಲ್ಲಿ ದೇವನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಗುವುದು ಎಂದರು. ಜಿಲ್ಲಾ ಮಟ್ಟದ ಶಿಕ್ಷಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮದ ವೇದಿಕೆ ನಿಮಾರ್ಣ, ಸಾಂಸ್ಕತಿಕ ಕಾರ್ಯಕ್ರಮ, ಊಟದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.