2 ಸಾವಿರ ನಿವೇಶನ ಸಿದ್ಧಪಡಿಸಲು ಗಡುವು

the deadline
the deadline
Published on
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಮೇ 15 ರೊಳಗೆ ಎರಡು ಸಾವಿರ ನಿವೇಶನ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಅಷ್ಟರಲ್ಲಿ ಅಧಿಕಾರಿಗಳು ಎಲ್ಲವನ್ನು ಸಿದ್ದಪಡಿಸಿರಬೇಕು ಈ ಬಗ್ಗೆ ಅಧಿಕಾರಿಗಳಿಗೆ ಗಡುವು ನೀಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಹಕ್ಕುಪತ್ರ ನೀಡುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಹೋಬಳಿ ಸೇರಿ ತಾಲೂಕಿನಲ್ಲಿ ಬಡವರಿಗೆ, ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಬೇಕು. ಸರ್ಕಾರ ಬಂದು ಮೂರು ವರ್ಷ ಪೂರೈಸಿದೆ. ಬಡವರಿಗೆ ನಿವೇಶನ, ವಸತಿ ಕಲ್ಪಿಸುವುದು ನಮ್ಮ ಜವಾಬ್ದಾರಿ ಆಗಿದೆ. ನಿವೇಶನ ಹಕ್ಕುಪತ್ರ ವಿತರಣೆ ವಿಳಂಬ ಆಗಬಾರದು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಸರ್ಕಾರ ಆಡಳಿತಕ್ಕೆ ಬಂದು ಮೂರು ವರ್ಷವಾದ ಹಿನ್ನೆಲೆಯಲ್ಲಿ ಮತ್ತಷ್ಟು ಆಡಳಿತ ಯಂತ್ರ ಚುರುಕುಗೊಳಿಸಲಾಗಿದೆ. ಮುಖ್ಯವಾಗಿ ಬಡವರಿಗೆ ನಿವೇಶನ ನೀಡುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಸಂಬಂಧ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಹಕ್ಕುಪತ್ರ ಸಿದ್ದಪಡಿಸಲು ಸೂಚನೆ:
ಈಗಾಗಲೇ ಎಲ್ಲೆಲ್ಲಿ ನಿವೇಶನಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಅವುಗಳಿಗೆ ಫಲಾನುಭವಿಗಳ ಆಯ್ಕೆ ಹಾಗೂ ಹಕ್ಕುಪತ್ರ ರೆಡಿ ಸಿದ್ದಪಡಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿವೇಶನ ಅಭಿವೃದ್ಧಿ ಪಡಿಸುತ್ತಿರುವ ಜಾಗಗಳಲ್ಲಿ ಎಲ್ಲೆಲ್ಲಿ ತಕರಾರು, ಅಡಚಣೆ ಇದೆ ಅಲ್ಲಿಗೆ ತಹಸೀಲ್ದಾರ್ ಇಒ, ಸರ್ವೇಯರ್, ಆರ್‌ಐಗಳು, ಸ್ಥಳೀಯ ಮುಖಂಡರು ಖುದ್ದು ಭೇಟಿ ನೀಡಿ ಸಮಸ್ಯೆ ಇತ್ಯರ್ಥ ಪಡಿಸಬೇಕು ಎಂದು ತಾಕೀತು ಮಾಡಿದರು. ಅರ್ಹ ಫಲಾನುಭವಿಗಳಿಗೆ ಪಕ್ಷಾತೀತವಾಗಿ ನಿವೇಶನ ಹಂಚಿಕೆ ಮಾಡಲಾಗುವುದು. ಮೇ.15 ರೊಳಗೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ಸಾವಿರ ನಿವೇಶನಗಳು ಸಿದ್ದ ಇರಬೇಕು ಇದು ಡಿಸಿ ಹಾಗೂ ಸಿಇಒ ಜವಾಬ್ದಾರಿಯಾಗಿದೆ ಈ ಇಬ್ಬರು ಅಧಿಕಾರಿಗಳು ಸಮನ್ವಯತೆಯಿಂದ ಅಧಿಕಾರಿಗಳ ಜತೆಗೂಡಿ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ನೀರಿನ ಸಮಸ್ಯೆಗೆ ಪರಿಹಾರ ನೀಡಿ:
ಕುಡಿಯುವ ನೀರು ಸಮಸ್ಯೆ ತ್ವರಿತ ಪರಿಹಾರ ಒದಗಿಸಲು ಸೂಚನೆ ನೀಡಲಾಗಿದೆ, ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಕುಡಿಯುವ ನೀರು ಸಮಸ್ಯೆ ಉಲ್ಬಣವಾಗಿದೆ. ಅಲ್ಲಿ ಪರ್ಯಾಯವಾಗಿ ಖಾಸಗಿ ಬೋರ್ವೆಲ್, ರೈತರ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಿ ಎಂದು ಉಸ್ತುವಾರಿ ಸಚಿವ ಕೆ,ಎಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವುದೇ ಗ್ರಾಮ, ನಗರ ವ್ಯಾಪ್ತಿಯಲ್ಲಿ ಕುಡಿಯಲು ನೀರಿಲ್ಲ ಎಂದು ವರದಿ ಬರಬಾರದು. ಪಂಚಾಯಿತಿ ಪಿಡಿಒಗಳು ಬೆಳಿಗ್ಗೆಯಿಂದ ಸಂಜೆ ವರೆಗೆ ಕೇಂದ್ರ ಸ್ಥಾನದಲ್ಲಿ ಇದ್ದು, ಕುಡಿಯುವ ನೀರು ಸಮಸ್ಯೆ ನಿರ್ವಹಣೆ ಮಾಡಬೇಕು ಎಂದರು. ಈಗಾಗಲೇ ಕುಡಿಯುವ ನೀರು ಸಮಸ್ಯೆ ಇರುವ ಜಾಗಗಳಲ್ಲಿ ಶೀಘ್ರ ಹೊಸ ಕೊಳವೆಬಾವಿಗಳನು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net