.27ಕ್ಕೆ ಉದ್ಯೋಗ ಮೇಳ

udyoga mela
udyoga mela
Published on
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ೆ.27ರಂದು ಉದ್ಯೋಗಮೇಳ ಆಯೋಜಿಲಾಗಿದ್ದು ಉದ್ಯೋಗಾಕಾಂಕ್ಷಿಗಳು ಆನ್‌ಲೈನ್ ಮೂಲಕ ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೊಡ್ಡಬಳ್ಳಾಪುರ ಕೈಗಾರಿಕೆಗಳ ಸಂಘ ಹಾಗೂ ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗುತ್ತಿದ್ದು ಉದ್ಯೋಗಮೇಳದಲ್ಲಿ ಅಂದಾಜು 75ಕ್ಕಿಂತ ಹೆಚ್ಚು ನಿಯೋಜಕರು, ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ 3 ಸಾವಿರಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ ಎಂದು ಡಿಸಿ ತಿಳಿಸಿದ್ದಾರೆ.
5 ಸ್ವವಿವರ ಪ್ರತಿ ತರಬೇಕು:
ಉದ್ಯೋಗಮೇಳದಲ್ಲಿ ಭಾಗವಹಿಸುವ ಉದ್ಯೋಗಕಾಂಕ್ಷಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಉದ್ಯೋಗಮೇಳದ ದಿನವು ಕೂಡ ಅಭ್ಯರ್ಥಿಗಳ ನೋಂದಣಿ ಕೌಂಟರ್‌ಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಭಾಗವಹಿಸಬಹುದು. 10ನೇ ತರಗತಿಗಿಂತ ಕಡಿಮೆ, 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ರೋಮಾ, ಇಂಜಿನಿಯರಿಂಗ್, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ ತರಬೇತಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಟ 5 ಬಯೋಡಾಟ(ಸ್ವ-ವಿವರ) ಗಳ ಪ್ರತಿಗಳೊಂದಿಗೆ ಭಾಗವಹಿಸಬಹುದಾಗಿದ್ದು ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ಡಿಸಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net