ಜಿಲ್ಲಾ ಪಂಚಾಯತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯುಂಟಾಗುವ ಗ್ರಾಮಗಳಲ್ಲಿ ತುರ್ತಾಗಿ ಕುಡಿಯುವ ನೀರನ್ನು ಒದಗಿಸಿ, ಪರಿಹಾರ ನೀಡುವ ನಿಟ್ಟಿನಲ್ಲಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ವಾರದ 7 ದಿನಗಳಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಸಾರ್ವಜನಿಕರು ದೂರವಾಣಿ ಸಂಖ್ಯೆ 080-22221050 ಕರೆ ಮಾಡಿ ತಿಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧಾ ತಿಳಿಸಿದ್ದಾರೆ. ಕಂಟ್ರೋಲ್ ರೂಂನಲ್ಲಿನಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ತಕ್ಷಣವೇ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ದಾಖಲಿಸಿಕೊಂಡು, ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆಯನ್ನು ಪರಿಹರಿಸಲು ಕ್ರಮವಹಿಸಲಿದ್ದಾರೆ ಎಂದು ಡಿಸಿ ತಿಳಿಸಿದ್ದಾರೆ.