ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿ ಬೇಸಿಗೆ ಹಿನ್ನಲೆಯಲ್ಲಿ ಆರಂಭಿಸಲಾದ ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡಿ, ಸಹಾಯವಾಣಿಗೆ ಬಂದ ಕರೆಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಪಂ ವತಿಯಿಂದ ಬೇಸಿಗೆ ಅವಯಲ್ಲಿ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈಗಾಗಲೇ ಜಿಲ್ಲೆಯ ಯಾವುದೇ ಗ್ರಾಮ ಂಚಾಯಿತಿ ವ್ಯಾಪ್ತಿಯಲ್ಲಿ ಸಮಸ್ಯೆಗಳು ಬಂದಲ್ಲಿ ಕರೆ ಮಾಡಲು 08022221050 ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು. ಸಹಾಯವಾಣಿಗೆ ಸಿಬ್ಬಂದಿ ನೇಮಕ ಮಾಡಲಾಗಿದೆ. ಅವರು ಜನರ ದೂರುಗಳಿಗೆ ತಕ್ಷಣ ಸ್ಪಂದಿಸಲಿದ್ದಾರೆ. ಸಹಾಯವಾಣಿ ಬಂದ ಕರೆಗಳನ್ನು ಆದರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ. ಜನರು ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಆದಲ್ಲಿ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದರು.