ವಿಶ್ವ ಯೋಗದಿನಕ್ಕೆ ಸಕಲ ಸಿದ್ದತೆ ಕೈಗೊಳ್ಳಿ

yoga-day
yoga-day
Published on
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲಾ ಮಟ್ಟದಲ್ಲಿ ವಿಶ್ವಯೋಗ ದಿನ ಆಚರಣೆಗೆ ಸಂಬಂಧಪಟ್ಟ ಇಲಾಖೆಯ ಎಲ್ಲ ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧಾ ಸೂಚನೆ ನೀಡಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು. ಉತ್ತಮ ಆರೋಗ್ಯಕ್ಕಾಗಿ ಯೋಗ ಎಂಬ ಘೋಷಣೆಯೊಂದಿಗೆ 12 ನೇ ಯೋಗ ದಿನವನ್ನು ಆಚರಿಸಲು ಉದ್ದೇಶಿಸಲಾಗಿದ್ದು, ಜವಾಬ್ದಾರಿ ವಹಿಸಿಕೊಂಡ ಅಧಿಕಾರಿಗಳು ಸಮರ್ಪವಾಗಿ ಕರ್ತವ್ಯ ನಿಭಾಯಿಸಬೇಕು ಎಂದು ತಾಕೀತು ಮಾಡಿದರು.
ಜೂ.21 ರಂದು ಯೋಗ:
ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಜೂ.21ರಂದು ಜರುಗುವ ಯೋಗ ದಿನಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಶಾಸಕರು ಮತ್ತು ಇನ್ನಿತರ ಜನ ಪ್ರತಿನಿಧಿಗಳನ್ನು ಆಹ್ವಾನಿಸಬೇಕು ಶಿಷ್ಟಾಚಾರದಂತೆ ಆಮಂತ್ರಣ ನೀಡಿ ಸ್ವಾಗತಿಸಬೇಕು ಎಂದು ಡಿಸಿ ಸೂಚಿಸಿದರು. ದೈನಂದಿನ ಕೆಲಸ ಕಾರ್ಯಗಳ ಜತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರ ಆದ್ಯತೆಯಾಗಿದೆ. ಯೋಗದಿಂದ ರೋಗ ಜಯಿಸುವ ದಿನವೇ ಯೋಗ ದಿನಾಚರಣೆಯಾಗಿದೆ ಇಂಥ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಹಾಗೂ ವಿವಿಧ ಯೋಗ ಸಂಸ್ಥೆಗಳವರು ಶ್ರಮಿಸಬೇಕು ಎಂದು ಮನವಿ ಮಾಡಿದರು.
ಏನೇನು ವ್ಯವಸ್ಥೆ ಇರಬೇಕು?
ಯೋಗಾರ್ಥಿಗಳಿಗೆ ಯೋಗ ಮಾಡಲು ಅನುಕೂಲವಾಗುವಂತೆ ಉತ್ತಮ ಯೋಗ ಮ್ಯಾಟ್‌ಗಳ ವ್ಯವಸ್ಥೆ ಇರಬೇಕು, ಜಮಖಾನ, ಟೀ ಶರ್ಟ್‌ಗಳ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು, ಯೋದ ದಿನದಂದು ಭಾಗವಹಿಸುವ ಎಲ್ಲರಿಗೂ ಶುದ್ದ ಕುಡಿಯುವ ನೀರು, ಉಪಹಾರ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು.
ಆರೋಗ್ಯ ಇಲಾಖೆಯಿಂದ ಆ್ಯಂಬುಲೆನ್ಸ್ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಬೇಕು, ವೈದ್ಯಾಧಿಕಾರಿಗಳು, ಸಿಬ್ಬಂದಿ ಔಷಧೋಪಚಾರದ ವ್ಯವಸ್ಥೆ ಬಗ್ಗೆ ನಿಗಾ ಇಡಬೇಕು, ಕ್ರೀಡಾಂಗಣದಲ್ಲಿ ಉತ್ತಮ ವೇದಿಕೆ ಸಿದ್ದಪಡಿಸಬೇಕು ಎಂದು ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನುರಾಧಾ ಸೂಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net