ಕಾಂಗ್ರೆಸ್​ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

ಹೊಸಕೋಟೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ನರಸಿಂಹಯ್ಯ, ನಗರಸಭೆ ಮಾಜಿ ಸದಸ್ಯ ಗಂಗಾಧರ್​, ಬಿಜೆಪಿ ಮುಖಂಡರು ಇದ್ದರು.
ಹೊಸಕೋಟೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ನರಸಿಂಹಯ್ಯ, ನಗರಸಭೆ ಮಾಜಿ ಸದಸ್ಯ ಗಂಗಾಧರ್​, ಬಿಜೆಪಿ ಮುಖಂಡರು ಇದ್ದರು.
Published on: 

ಹೊಸಕೋಟೆ : ಹಿಂದೆ ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್​ ಭ್ರಷ್ಟಾಚಾರದಿಂದ ಬೇಸತ್ತು ಜನ ಬಿಜೆಪಿಗೆ ಅಧಿಕಾರ ನೀಡಿದ್ದು, ಇದೀಗ ಕಾಂಗ್ರೆಸ್​ನವರೇ ಬಿಜೆಪಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ. ಪ್ರಧಾನ ಮಂತ್ರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಕಾಂಗ್ರೆಸ್​ ವಿರುದ್ಧ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ನಾಗೇಶ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಪ್ರಸ್​ಕ್ಲಬ್​ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2014ರಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ನಡೆದ ಭ್ರಷ್ಟಾಚಾರ ಕಾಂಗ್ರೆಸ್​ ವಿರುದ್ಧ ಜನರಲ್ಲಿ ಅಸಮಾಧಾನ ಮೂಡಿಸಿದ್ದವು. ಜನರ ಬೇಸತ್ತು ಬಿಜೆಪಿಗೆ ಕೇಂದ್ರದಲ್ಲಿ ಅಧಿಕಾರ ನೀಡಿದ್ದು, ಇದೀಗ ಕಾಂಗ್ರೆಸ್​ ವಿನಾಕಾರಣ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದರು.

ಬಿಜೆಪಿ ಎಸ್​.ಸಿ.ಮೋರ್ಚಾ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ಕೇಂದ್ರವು ಅಂಬೇಡ್ಕರ್​ ಜೀವನ, ಹೋರಾಟ ಹಾಗೂ ಕೊಡುಗೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಪಂಚತೀರ್ಥಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಅಂಬೇಡ್ಕರ್​ ವಿಚಾರದಲ್ಲಿ ಕಾಂಗ್ರೆಸ್​ ನಿಲುವು ಏನಾಗಿತ್ತು ಎಂಬುದನ್ನು ಜನರು ಪ್ರಶ್ನಿಸಬೇಕಿದೆ ಎಂದು ಹೇಳಿದರು.

ತಾಲೂಕು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ನರಸಿಂಹಯ್ಯ ಮಾತನಾಡಿ, ದೇಶದ ಅಭಿವೃದ್ಧಿಗೆ ಮಹತ್ವದ ಯೋಜನೆ ಜಾರಿಗೆ ತಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಯುವಜನರು ಹಾಗೂ ಸಂಘಟನೆಗಳು ಹೋರಾಟ ನಡೆಸುವುದಾದರೆ ಉತ್ತಮ ಶಿಕ್ಷಣ, ಗುಣಮಟ್ಟದ ಆರೋಗ್ಯ ಸೇವೆ, ವೃದ್ಧರಿಗೆ ಪಿಂಚಣಿ ಮತ್ತು ಕಾರ್ಖಾನೆಗಳಲ್ಲಿ ಉದ್ಯೋಗಾವಕಾಶ ಕಲ್ಪಿಸುವಂತೆ ಒತ್ತಾಯಿಸಲಿ. ಅದನ್ನು ಬಿಟ್ಟು ರಾಜಕೀಯ ಪಕ್ಷಗಳೊಂದಿಗೆ ಕೈಜೋಡಿಸಿ ದೇಶದಲ್ಲಿ ಅಸ್ಥಿರತೆ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಾಧ್ಯಮಗಳು ಮತ್ತು ಪೊಲೀಸ್​ ಇಲಾಖೆ ಇಂತಹ ಪ್ರಚೋದನಕಾರಿ ಹೇಳಿಕೆಗಳ ವಿಚಾರದಲ್ಲಿ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net