ಗ್ರಾಮಠಾಣಾ ಜಾಗ ಒತ್ತುವರಿ ತೆರವು

Removal of Encroachments
Removal of Encroachments
Removal of Encroachments
Published on: 

ವಿಜಯವಾಣಿ ಸುದ್ದಿಜಾಲ ಮಧುರೆ

ದೊಡ್ಡಬಳ್ಳಾಪುರ ತಾಲೂಕು ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಂಪುರ ಮಜರ ವಡೇರಹಳ್ಳಿ ಗ್ರಾಮದಲ್ಲಿದ್ದ 2 ಎಕರೆ 10 ಗುಂಟೆ ವಿಸ್ತೀರ್ಣದ ಗ್ರಾಮಠಾಣಾ (ಸರ್ಕಾರಿ) ಜಾಗದ ಒತ್ತುವರಿಯನ್ನು ಕಂದಾಯ ಇಲಾಖೆ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆದರ್ಶ್​ ಕುಮಾರ್​ ನೇತೃತ್ವದಲ್ಲಿ ಪಂಚಾಯ್ತಿತಿ ಸಿಬ್ಬಂದಿ ಹಾಗೂ ಪೊಲೀಸ್​ ಭದ್ರತೆಯೊಂದಿಗೆ ಜೆಸಿಬಿ ಯಂತ್ರಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಯಿತು. ತೆರವುಗೊಳಿಸಲಾದ ಜಾಗವನ್ನು ಪಂಚಾಯಿತಿ ಸುಪರ್ದಿಗೆ ಪಡೆಯಲಾಯಿತು. . ಗ್ರಾಮಠಾಣಾ ಜಾಗದ ಒತ್ತುವರಿ ತೆರವಿಗಾಗಿ 2 ವರ್ಷದಿಂದ ನಿರಂತರ ಹೋರಾಟ ನಡೆಸುತ್ತಿದ್ದೆವು. ಪಂಚಾಯಿತಿಗೆ ಸಲ್ಲಿಸಿದ್ದ ಅರ್ಜಿಯಂತೆ ಅಧಿಕಾರಿಗಳು ಸರ್ವೇ ನಡೆಸಿ, ಜಾಗವನ್ನು ಪಂಚಾಯಿತಿ ಸುಪರ್ದಿಗೆ ಪಡೆದಿದ್ದಾರೆ ಎಂದು ಕೆಆರ್​ಎಸ್​ ಪಕ್ಷದ ತಾಲೂಕು ಕಾರ್ಯದರ್ಶಿ ಜಯರಾಮ್​ ಪ್ರತಿಕ್ರಿಯಿಸಿದರು.