ರಂಗನಾಥ ಸ್ವಾಮಿ ದರ್ಶನಕ್ಕೆ ಅವಕಾಶ

madure temple open
madure temple open
madure temple open
Published on: 

ವಿಜಯವಾಣಿ ಸುದ್ದಿಜಾಲ ಮಧುರೆ

ಮಧುರೆ ಹೋಬಳಿ ಮಲ್ಲೋಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹಾಕಲಾಗಿದ್ದ ಬೀಗವನ್ನು ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಗುರುವಾರ ತೆರವುಗೊಳಿಸಲಾಗಿದ್ದು, ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಸಿಕ್ಕಿದಂತಾಗಿದೆ.ದೇವಸ್ಥಾನದ ಒಡವೆಗಳ ನಿರ್ವಹಣೆ ಹಾಗೂ ಪೂಜಾ ಕೈಂಕರ್ಯಗಳ ವಿಚಾರವಾಗಿ ಗ್ರಾಮಸ್ಥರ ಎರಡು ಬಣಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಎರಡು ಬೀಗಗಳನ್ನು ಹಾಕಲಾಗಿತ್ತು. ಇದರಿಂದ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ಸ್ಥಗಿತಗೊಂಡಿದ್ದವು.ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಉಪವಿಭಾಗಾಧಿಕಾರಿ ಮಂಜುನಾಥ್​ ಎರಡೂ ಬಣಗಳ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಮನವೊಲಿಸುವ ಮೂಲಕ ದೇವಸ್ಥಾನಕ್ಕೆ ಹಾಕಿದ್ದ ಬೀಗಗಳನ್ನು ತೆರವುಗೊಳಿಸಿದರು.

ಡಿಸಿ ನೇತೃತ್ವದಲ್ಲಿ ಸಭೆ:

ದೇವಸ್ಥಾನದ ಬಾಗಿಲು ತೆರೆಯಲಾಗಿದ್ದು, ಹೊರಗಿನಿಂದ ಅರ್ಚಕರನ್ನು ಕರೆಸಿ ಎಂದಿನಂತೆ ಪೂಜಾ ಕೈಂಕರ್ಯಗಳನ್ನು ನಡೆಸಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ, ದೇವಸ್ಥಾನದ ವಿಚಾರವಾಗಿ ಉಂಟಾಗಿರುವ ಭಿನ್ನಾಭಿಪ್ರಾಯಗಳ ಕುರಿತು ಚರ್ಚಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಟಿ.ಆರ್​.ಮಂಜುನಾಥ್​ ತಿಳಿಸಿದರು.