ವಾಸ ಸ್ಥಳದಲ್ಲೇ ಆರೋಗ್ಯ ತಪಾಸಣೆ

Health check-up at your place of residence
Health check-up at residence
Health check-up at residence
Published on: 

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಜಿಲ್ಲೆಯಲ್ಲಿ 30 ಸಾವಿರಕ್ಕೂ ಅಧಿಕ ಕಾರ್ಮಿಕರಿದ್ದಾರೆ. ಕಟ್ಟಡ ಕಾರ್ಮಿಕರು ವಾಸವಿರುವ ಸ್ಥಳಗಳಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್​.ಮುನಿಯಪ್ಪ ತಿಳಿಸಿದರು.

ದೇವನಹಳ್ಳಿಯಲ್ಲಿ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿಮಾರ್ಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಒದಗಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಮಂಡಳಿಯಲ್ಲಿ ನೋಂದಾಯಿತರಾದ ಕಟ್ಟಡ ಮತ್ತು ಇತರೆ ನಿಮಾರ್ಣ ಕಾರ್ಮಿಕರು, ಅವರ ಅವಲಂಬಿತರು ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಹೆಚ್ಚೆಚ್ಚು ಅರಿವು ಮೂಡಿಸಬೇಕು ಎಂದು ಸೂಚಿಸಿದರು. ಮನುಷ್ಯನಿಗೆ ಎಲ್ಲಕ್ಕಿಂತಲೂ ಆರೋಗ್ಯ ಭಾಗ್ಯ ಬಹಳ ಮುಖ್ಯ ಅದನ್ನು ರ್ನಿಲಕ್ಷ$್ಯ ಮಾಡಬಾರದು ಕಾಲಕಾಲಕ್ಕೆ ವೈದ್ಯಕಿಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧಿಕಾರಿಗಳಿಗೆ ಮಾಹಿತಿ ಪಡೆದ ಸಚಿವ:

ದೇವನಹಳ್ಳಿ ಪಟ್ಟಣದ ಅಂಬೇಡ್ಕರ್​ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸುವುದನ್ನು ಪರಿಶೀಲನೆ ನಡೆಸಿ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವಾಹನಕ್ಕೆ ಹಸಿರು ನಿಶಾನೆ ತೋರಿಸಿದರು. ಕಾರ್ಮಿಕರರೊಂದಿಗೆ ಕೆಲವೊತ್ತು ಸಂವಾದ ನಡೆಸಿದ ಸಚಿವರು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು. ಜಿಲ್ಲೆಯಲ್ಲಿ ಸುಮಾರು ಮೂರು ತಿಂಗಳ ಕಾಲ ನಿರಂತವಾಗಿ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದ್ದು, ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.