ಶಿಕ್ಷಕರಿಗೆ ಬಿಇಒ ಅಭಿನಂದನೆ

BEO Congratulations to the teachers
Published on

ಕುಶಾಲನಗರ:

ರಾಜ್ಯದಲ್ಲಿ ಮಾರ್ಚ್–ಏಪ್ರಿಲ್‌ನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಕೊಡಗು
ಜಿಲ್ಲೆ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿ ಉತ್ತಮ ಸಾಧನೆ ತೋರಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿ- ಪೋಷಕ ವೃಂದಕ್ಕೆ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಕೃತಜ್ಞತೆ ಸಲ್ಲಿಸಿದರು. ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಶನಿವಾರ ಏರ್ಪಡಿಸಿದ್ದ ಶೈಕ್ಷಣಿಕ ಸಭೆ ಉದ್ಘಾಟಿಸಿ ಶೈಕ್ಷಣಿಕ ವಿಚಾರಗಳ ಕುರಿತು ಮಾಹಿತಿ ನೀಡಿದರು.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಗುಣಾತ್ಮಕ ಫಲಿತಾಂಶ ಗಳಿಸುವಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದೆ. ಗುಣಾತ್ಮಕ ಫಲಿತಾಂಶ ಪಡೆಯಲು ಕಾರಣರಾದ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರ ಪರಿಶ್ರಮ ಬಹಳ ಮುಖ್ಯವಾಗಿದೆ. ಪ್ರಸಕ್ತ ಸಾಲಿನಲ್ಲಿ ಕೂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆ ಉತ್ತಮ ಸ್ಥಾನ ಗಳಿಸುವಲ್ಲಿ ಶಾಲಾ ಮುಖ್ಯ ಗುರುಗಳು ಹಾಗೂ ಶಿಕ್ಷಕರು ಸಮನ್ವಯತೆಯಿಂದ ಶ್ರಮಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಸ್ತು- ಸಂಯಮದೊAದಿಗೆ ಉತ್ತಮ ಮಾನವೀಯ ಮೌಲ್ಯಗಳು ಹಾಗೂ ಜೀವನ ಕೌಶಲ್ಯಗಳನ್ನು ಕಲಿಸಬೇಕು ಎಂದರು.

ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಮಹದೇವಸ್ವಾಮಿ ಮಾತನಾಡಿ, ಕಳೆದ ವರ್ಷದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆ ಉತ್ತಮ ಸಾಧನೆ ಹೊಂದುವ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿ ಗುಣಾತ್ಮಕ ಫಲಿತಾಂಶ ಪಡೆಯಲು ಕಾರಣರಾದ ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರ ಪರಿಶ್ರಮಕ್ಕೆ ಶಿಕ್ಷಣ ಇಲಾಖೆ ಅಭಿನಂದನೆ ಸಲ್ಲಿಸುತ್ತದೆ ಎಂದರು.
ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಕಾಳನಾಯಕ್ ಮಾತನಾಡಿ, ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶವುಳ್ಳ ಆಹಾರ ನೀಡುವುದು ಸೇರಿದಂತೆ ಸ್ವಚ್ಚತೆ, ನೈರ್ಮಲ್ಯ ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ.ಸೋಮಶೇಖರ್, ಎಲ್ಲರೂ ಒಗ್ಗಟ್ಟಿನಿಂದ ಸೇರಿ ಮಕ್ಕಳ ಕಲಿಕೆಯನ್ನು ಉತ್ತಮಪಡಿಸಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಲು ಸಾಧ್ಯ ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಜಿ.ಎಂ.ಹೇಮAತ್, ಶಿಕ್ಷಣ ಇಲಾಖೆಯ ವಿವಿಧ ಶೈಕ್ಷಣಿಕ ಮಾಹಿತಿಗಳನ್ನು ನೀಡಿದರು.
ಶಾಲೆಯ ಉಪ ಪ್ರಾಂಶುಪಾಲ ವೈ.ಜೆ. ಪರಮೇಶ್ವರಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್ ಪಲ್ಲೇದ್, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಬಿ.ಎನ್.ಪುಷ್ಪ, ಎಂ.ವಿ.ಮAಜೇಶ್, ಬಿ.ಆರ್.ಪಿ.,ಎಸ್.ಎಸ್.ಶಿವಕುಮಾರ್, ಇಸಿಓ ಶೇಖರ್ ಹಾಗೂ ತಾಲೂಕಿನ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಇದ್ದರು.
ಇದೇ ವೇಳೆಯಲ್ಲಿ ಇತ್ತೀಚೆಗೆ ನಿವೃತ್ತರಾದ ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್ ಅವರನ್ನು ಬಿಇಓ ಭಾಗ್ಯಮ್ಮ ಸನ್ಮಾನಿಸಿ ಗೌರವಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net