

ಬೆಂಗಳೂರು: ಸೆ.25 ಬುಧುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3:30ರವರೆಗೆ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ಕೈಗೆತ್ತಿಕೊಳ್ಳುವುದರಿಂದ ನಗರದ ಕೆಲ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಕಚೇರಿ ಮೂಲಗಳು ತಿಳಿಸಿವೆ.
ಹಳೆಹಳ್ಳಿ, ಮಾರ್ಗೊಂಡಣಹಳ್ಳಿ, ಗವಿಗುಡಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.