

ಬೆಂಗಳೂರು: ಬೆಸ್ಕಾಂ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತಿಕರಣದ(ಅಪ್ಡೇಟ್) ಹಿನ್ನೆಲೆ ಅ.5, 6 ರಂದು ಆನ್ಲೈನ್ ಸೇವೆಗಳು ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಐಪಿಡಿಎಸ್ ಐಟಿ ಹಂತ-2ರ ಯೋಜನೆಯ ಭಾಗವಾಗಿ ಆರ್ಎಪಿಡಿಆರ್ಪಿ ಅಪ್ಲಿಕೇಷನ್ ಸೇವೆ ಲಭ್ಯ ಇರುವುದಿಲ್ಲ. ಸಿಸ್ಟಂ ಡೌನ್ಟೈಮ್ ಅ.4ರ ರಾತ್ರಿ 9 ರಿಂದ ಆರಂಭವಾಗಿ ಅ.7ರ ಬೆಳಗ್ಗೆ 6ಕ್ಕೆ ಕೊನೆಗೊಳ್ಳುತ್ತದೆ. ಸೇವೆಯ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಬೆಸ್ಕಾಂ ಈ ಕಾರ್ಯ ಕೈಗೊಂಡಿದೆ.
30 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಪಟ್ಟಣಗಳನ್ನು ಒಳಗೊಂಡಿರುವ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಭಾಗ-ಎ ಐಟಿ ಯೋಜನೆಯ ಅನುಷ್ಠಾನಕ್ಕೆ ಬೆಸ್ಕಾಂ ನೋಡಲ್ ಏಜೆನ್ಸಿಯಾಗಿದೆ. ಹೊಸ ಅಪ್ಲಿಕೇಶನ್ಗಳು ಅ.7ರ ಬೆಳಗ್ಗೆ 6ರವರೆಗೆ ಕಾರ್ಯನಿರ್ವಹಿಸಿದ ನಂತರ ಅಪ್ಲಿಕೇಶನ್ ದತೆ ಹೆಚ್ಚಲಿದೆ. ಇದರಿಂ ಬಳಕೆದಾರರಿಗೂ ಉತ್ತಮ ಸೇವೆ ಲಭ್ಯವಾಗಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಹೊಸ ಸಂಪರ್ಕಗಳ ಪ್ರಕ್ರಿಯೆ, ಹೆಸರು ಮತ್ತು ಸುಂಕ ಬದಲಾವಣೆಗಳು, ಹೆಸರು ವರ್ಗಾವಣೆ ಮತ್ತು ತಾತ್ಕಾಲಿಕ ಸಂಪರ್ಕಗಳಂತಹ ಕಾರ್ಯಾಚರಣೆಗಳಿಗೆ 'ಆರ್ಎಪಿಡಿಆರ್ಪಿ' ಅಪ್ಲಿಕೇಶನ್ ಲಭ್ಯವಿರುವುದಿಲ್ಲ. ಬೆಸ್ಕಾಂ ನಗದು ವಿಭಾಗಗಳಲ್ಲಿ (ಕ್ಯಾಶ್ ಕೌಂಟರ್) ಪಾವತಿ ಇರುವುದಿಲ್ಲ. ಹೊಸ ಸಂಪರ್ಕಗಳು, ಹೆಸರು ಮತ್ತು ವಿಳಾಸ ಬದಲಾವಣೆ ಸೇರಿದಂತೆ ಇತರೆ ಸೇವೆಗಳಿಗಾಗಿ ಗ್ರಾಹಕ ಪೋರ್ಟಲ್ ಲಭ್ಯವಿರುವುದಿಲ್ಲ. ಗ್ರಾಹಕ ಪೋರ್ಟಲ್ ಮತ್ತು ಥರ್ಡ್ ಪಾರ್ಟಿ ಪಾವತಿ ಚಾನಲ್ಗಳ ಮೂಲಕ ಆನ್ಲೈನ್ ಬಿಲ್ ಪಾವತಿಗಳು ಅ.4ರ ರಾತ್ರಿ 9ರಿಂದ ಅ.5ರ ಬೆಳಗ್ಗೆ 11ರವರೆಗೆ ಲಭ್ಯವಿರುವುದಿಲ್ಲ. "ಆರ್ಎಪಿಡಿಆರ್ಪಿ' ಸೇವೆ ಇಲ್ಲದ ಕಾರಣ, ಮೊಬೈಲ್ ಅಪ್ಲಿಕೇಶನ್ ಸೇವೆ ಅಲಭ್ಯ.
ಬೆಂಗಳೂರು, ಶಿಡ್ಲಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು,ತಿಪಟೂರು ಹಾಗೂ ಗೌರಿಬಿದನೂರು ನಗರಗಳಲ್ಲಿ ಆನ್ಲೈನ್ ಸೇವೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿ 1912 ಸಂಪರ್ಕಿಸಬಹುದು.