

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಸೇವೆಗಳನ್ನು ಸಕಾಲಕ್ಕೆ ಸಾರ್ವಜನಿಕರಿಗೆ ಮುಟ್ಟಿಸುವಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಕಂದಾಯ ಅಧಿಕಾರಿಗಳಿಗೆ ನೀಡುವ ಪ್ರಸಕ್ತ ಸಾಲಿನ ಅತ್ಯುತ್ತಮ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಪ್ರಶಸ್ತಿಗೆ ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಸಮಾಲೋಚಕ ವೆಂಕಟೇಶ ಬುಳ್ಳಾ ಆಯ್ಕೆ ಆಗಿದ್ದಾರೆ.
ಮೂರು ವರ್ಷಗಳ ಸೇವೆ ಪರಿಗಣಿಸಿ ನೀಡುವ ಈ ಪ್ರಶಸ್ತಿಗೆ ವೆಂಕಟೇಶ ಬುಳ್ಳಾ ಅವರು ರಾಯಚೂರ ಮತ್ತು ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ಸಲ್ಲಿಸಿರುವ ಉತ್ತಮ ಸೇವೆ ಗುರುತಿಸಿ ಆಯ್ಕೆ ಮಾಡಲಾಗಿದೆ. ಸೆ. 27ರಂದು ಬೆಂಗಳೂರಿನಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.