

ಮಂಡ್ಯ: ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರನ್ನು 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿಧಾನ ಪರಿತಷ್‌ನ ಅಧೀನ ಕಾರ್ಯದರ್ಶಿ ಮೀನಾ ನಾಯಕ್ ತಿಳಿಸಿದ್ದಾರೆ.
ಜು.18ರಂದು ಸಂಜೆ 6ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವಿರಲಿದೆ. ವಿಧಾನ ಪರಿಷತ್‌ನ ಸಭಾಪತಿ ಎಸ್.ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಟಿಎಸ್‌ಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪ್ರಶಸ್ತಿ ಘೋಷಣೆ ಹಿನ್ನೆಲೆಯಲ್ಲಿ ಕೆಟಿಎಸ್‌ಗೆ ಅಭಿನಂದನೆ ಸಲ್ಲಿಸಿರುವ ಕರ್ನಾಟಕ ಸಂಘ, ನಾಡು ನುಡಿ ಮತ್ತು ನೆಲಜಲ, ಪದವೀಧರರ ಸಮಸ್ಯೆ, ಶಿಕ್ಷಕ ಹಾಗೂ ರೈತ ಸಮುದಾಯದ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಸೆಳೆದು ಪರಿಹಾರ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮ್ಮ ಶಾಸಕತ್ವದ ಅವಧಿಪೂರ್ಣ ಸದನಕ್ಕೆ ಹಾಜರಾಗಿ ಜವಾಬ್ದಾರಿಯನ್ನು ನಿರ್ವಹಣೆ ಮಾಡಿದ್ದಾರೆಂದು ಶ್ಲಾಘಿಸಿದ್ದಾರೆ.