ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Bel_Speaker
Published on

ಬೆಳ್ತಂಗಡಿ: ಸಂಸದೀಯ ವ್ಯವಹಾರಗಳ ಇಲಾಖೆ ಕರ್ನಾಟಕ ಸರ್ಕಾರ, ದ.ಕ.ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಂತ ಆಗ್ನೆಸ್ ಪದವಿಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ.ಮಂ. ಪಪೂ ಕಾಲೇಜಿನ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿಗಳಾದ ಕಾರ್ತಿಕ್ ಡಿ.ಸಿ. ಹಾಗೂ ಹಸೀನಾ ಕೆ. ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ ಪಡೆದುಕೊಂಡಿದ್ದಾರೆ.

ದ.ಕ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಸಿ.ಜಯಣ್ಣ ಪ್ರಶಸ್ತಿ ವಿತರಿಸಿದರು. ಬಹುಮಾನ ವಿಜೇತರನ್ನು ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ.ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ದಿವ್ಯಾ ಕುಮಾರಿ ತರಬೇತಿ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net