ತಾಲೂಕು ಮಟ್ಟದ ಅಥ್ಲೆಟಿಕ್ಸ್​ನಲ್ಲಿ ಉತ್ತಮ ಸಾಧನೆ

khp college
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸನಾ ಶಾಹೀನ ಪದವಿ ಪೂರ್ವ ಮಹಾವಿದ್ಯಾಲಯದ ಆಶ್ರಯದಲ್ಲಿ ಸಂಘಟಿಸಿದ್ದ ಹುಬ್ಬಳ್ಳಿ ಶಹರ ತಾಲೂಕು ಮಟ್ಟದ ಅಥ್ಲೆಟಿಕ್ಸ್​ನಲ್ಲಿ ನಗರದ ವೇಮನ ವಿದ್ಯಾವರ್ಧಕ ಸಂಘದ ಕೆ.ಎಚ್.ಪಾಟೀಲ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಹನುಮಂತಪ್ಪ ಹಾದಿಮನಿ 5,000 ಮೀಟರ್ ಓಟ ಹಾಗೂ 1,500 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದರೆ, ಮಹಮ್ಮದ ಪರ್ವೆಜ್ ಕಮಡೊಳ್ಳಿ ಸರಪಳಿ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಚೆಸ್ ಪಂದ್ಯಾವಳಿಯಲ್ಲಿ ಕ್ಷಿತಿಜಾ ಯತ್ನಟ್ಟಿ ಹಾಗೂ ವೈಷ್ಣವಿ ಹಳ್ಳಿಕೇರಿ ಗೆಲವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net