ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ

WhatsApp Image 2024-09-28 at 6.05.54 PM
Published on

ಧಾರವಾಡ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಹಸೀಲ್ದಾರ್ ಪ್ರವೀಣ ಹುಚ್ಚಣ್ಣವರ ಅವರು 2023- 24ನೇ ಸಾಲಿನ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಭಾಜನರಾದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವುದನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಧಾರವಾಡ ನಿವಾಸಿಯಾದ ಇವರು ಹಳಿಯಾಳಕ್ಕೂ ಮುನ್ನ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net