

ಭಟ್ಕಳ: ತಾಲೂಕಿನ ಭೂಮಾಪಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಭೂಮಾಪಕ ವಾಸುದೇವ ಮೊಗೇರ ಅವರನ್ನು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ನೀಡಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಿ ಸನ್ಮಾನಿಸಿದರು.
ಜನಸ್ನೇಹಿ ಅಧಿಕಾರಿ ಎಂದೇ ಹೆಸರು ಪಡೆದಿರುವ ವಾಸುದೇವ ಮೊಗೇರ ಅವರು ಸಾರ್ವಜನಿಕರ ಸಮಸ್ಯೆಗೆ ಉತ್ತಮವಾಗಿ ಸ್ಪಂದಿಸುತ್ತಾರೆ. ಬೆಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ, ವಿಕಾಸ ಸೌಧ ಅಭಿನಂದನಾ ಸಭೆಯಲ್ಲಿ 2024ರ ಅತ್ಯುತ್ತಮ ಅಧಿಕಾರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.