

ಚಳ್ಳಕೆರೆ: ನಗರದ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಸೆ.27ರ ಬುಧವಾರ ಬೆಳಗ್ಗೆ 10 ಗಂಟೆಗೆ ತಾಲೂಕು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ವತಿಯಿಂದ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ ಮತ್ತು ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಸಿರಿಗೆರೆ ತರಳಬಾಳು ಮಠದ ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಚಾರ್ಯ ಸ್ವಾಮೀಜಿ ಸಾನ್ನಿಧ್ಯ, ಶಾಸಕ ಟಿ. ರಘುಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಬಿ.ಜಿ. ಗೋವಿಂದಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ಎಂ.ಚಂದ್ರಪ್ಪ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಅಧ್ಯಕ್ಷ ಯಾದಲಗಟ್ಟೆ ಜಗನ್ನಾಥ, ಕಾರ್ಯದರ್ಶಿ ದಯಾನಂದ ಪ್ರಹ್ಲಾದ್ ತಿಳಿಸಿದ್ದಾರೆ.