ವಿದ್ಯಾರತ್ನಗೆ ಅತ್ಯುತ್ತಮ ಶಿಕ್ಷಕಿ ಪುರಸ್ಕಾರ ಪ್ರದಾನ

Sub_Vidyaratna
Published on

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಮಾರಸ್ಚಾಮಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ವಿದ್ಯಾರತ್ನ ಎಚ್ ಅವರು, ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ರುಪ್ಸ ಕೊಡಮಾಡುವ ಅತ್ಯುತ್ತಮ ಶಿಕ್ಷಕಿ ಪುರಸ್ಕಾರ, ವಿದ್ಯಾರತ್ನವನ್ನು ಪಡೆದಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ನಡೆದ ರುಪ್ಸದ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪುರಸ್ಕಾರ ಪಡೆದುಕೊಂಡರು. ಕುಮಾರಸ್ವಾಮಿ ವಿದ್ಯಾಲಯದಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಇವರು ವಿದ್ಯಾಲಯದ ಪ್ರಗತಿಗೆ ಅನವರತ ದುಡಿದವರು. ವಿದ್ಯಾರತ್ನ ಪುರಸ್ಕಾರ ಪಡೆದಿರುವುದಕ್ಕೆ ಶಿಷ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net