ವಾಹನ ಸಮೇತ ಬೀಟೆ ನಾಟಾ ವಶಕ್ಕೆ

ವಾಹನ ಸಮೇತ ಬೀಟೆ ನಾಟಾ ವಶಕ್ಕೆ
Published on

ಕುಶಾಲನಗರ: ಬೀಟೆ ನಾಟಾಗಳನ್ನು ಸಾಗಣೆ ಮಾಡುತ್ತಿದ್ದ ವಾಹನವನ್ನು ಮಂಗಳವಾರ ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಕುಶಾಲನಗರ ಕಡೆಯಿಂದ ಮೈಸೂರು ಕಡೆಗೆ ಪಿಕ್‌ಅಪ್ ವಾಹನದಲ್ಲಿ ಬೀಟೆ ನಾಟಾಗಳನ್ನು ಸಾಗಿಸುತ್ತಿದ್ದ ಸಂದರ್ಭ ಕೊಡಗು ಮೈಸೂರು ಗಡಿ ಭಾಗದ ಅರಣ್ಯ ತಪಾಸಣಾ ಕೇಂದ್ರದ ಸಿಬ್ಬಂದಿ ಪರೀಕ್ಷಿಸಿದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂದರ್ಭ ವಾಹನ ಚಾಲಕ ಮತ್ತು ಮತ್ತೊಬ್ಬ ವ್ಯಕ್ತಿ ಓಡಿಹೋಗಿ ತಪ್ಪಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಮಾಲು ಸಹಿತ ವಾಹನ ವಶಕ್ಕೆ ಪಡೆದು, ತನಿಖೆ ಕೈಗೊಂಡಿದ್ದಾರೆ. ಆರ್‌ಎಫ್‌ಒ ರತನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net