ಬೇಟಿ ಬಚಾವೋ ಬೇಟಿ ಪಡವೋ ಪೋಸ್ಟರ್ ಬಿಡುಗಡೆ

beti padavo
Published on

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮ್ತತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಇವರ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ವೆಂಕಟರಾಜ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಬಿಡುಗಡೆಗೊಳಿಸಿದರು.


ಈ ಸಂದರ್ಭ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಆನಂದ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್, ಮಹಿಳೋದಯ ಒಕ್ಕೂಟದ ಸಂಚಾಲಕಿ ಜಾಯ್ಸಿ ಮೆನೆಜಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
೧೨ಆದರ್ಶ್‌ಕೆಡಿಜಿಎ೨:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net