ಸಿರಿಧಾನ್ಯದಿಂದ ಉತ್ತಮ ಆರೋಗ್ಯ: ಪ್ರದೀಪ್ ಕುಮಾರ್ ಬಿ.ಅನಿಸಿಕೆ

Ksd_health
Published on

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ಬದಲಾಗುತ್ತಿರುವ ಜೀವನ ಶೈಲಿಯಿಂದ ಹಲವಾರು ಕಾಯಿಲೆಗಳು ನಮ್ಮನ್ನು ಆವರಿಸುತ್ತಿದ್ದು, ಇದರಿಂದ ಪಾರಾಗಲು ಹಾಗೂ ಆರೋಗ್ಯ ಸ್ಥಿತಿ ಕಾಪಾಡಲು ಸಿರಿಧಾನ್ಯಗಳನ್ನು ಸೇವಿಸಬೇಕು ಎಂದು ಮಂಜೇಶ್ವರ ಉಪಜಿಲ್ಲಾ ನೂನ್ ಮೀಲ್ ಅಧಿಕಾರಿ ಪ್ರದೀಪ್ ಕುಮಾರ್ ಬಿ.ತಿಳಿಸಿದರು.

ಕೊಡ್ಲಮೊಗರು ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿಶ್ವ ಸಿರಿಧಾನ್ಯ ದಿನದ ಅಂಗವಾಗಿ ಆಯೋಜಿಸಲಾಗಿದ್ದ ತಿನಿಸುಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಪಿ.ಎ.ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಮೋಹನ್, ಮಾತೃಸಂಘದ ಅಧ್ಯಕ್ಷೆ ರಿಯಾನ, ಪಿಟಿಎ ಸದಸ್ಯರಾದ ಅಬ್ದುಲ್ ಅಜೀಜ್, ಶಿಕ್ಷಕರು, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಶಾಲಾ ಮುಖ್ಯಶಿಕ್ಷಕಿ ಕೃಷ್ಣವೇಣಿ ಬಿ.ಸ್ವಾಗತಿಸಿದರು. ಸಂಧ್ಯಾ ಹಾಗೂ ಸಂದೀಪ್ ಆರ್.ಬಳ್ಳಾಲ್ ನಿರೂಪಿಸಿದರು. ಹಿರಿಯ ಶಿಕ್ಷಕಿ ಉಷಾ ಬೇಬಿ ವಂದಿಸಿದರು. ಸಿರಿಧಾನ್ಯದ ಮೂಲಕ ತಯಾರಿಸಲಾದ ವಿವಿಧ ತಿನಿಸುಗಳ ಬಗ್ಗೆ ಅತಿಥಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರದರ್ಶನದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net