

ಭೀಮಪ್ಪ ಗಡಾದ ಒತ್ತಾಯ
ಬೆಳಗಾವಿ:ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ, ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಭಾಗದ ಒಬ್ಬರನ್ನು ಮುಖ್ಯಮಂತ್ರಿ, ನಾಲ್ವರನ್ನು ಉಪಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡುವಂತೆ ರಾಜ್ಯಪಾಲರಿಗೆ, ಮುಖ್ಯಮಂತ್ರಿ ಗೆ ಪತ್ರ ಬರೆಯಲಾಗಿದೆ. ಜತೆಗೆ ಕಾನೂನು ಹೋರಾಟ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾದ ಹೇಳಿದರು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಚು ನೂರಾರು ಕೋಟಿ ರೂ. ಖರ್ಚು ಮಾಡಿ ಸುವರ್ಣ ವಿಧಾನಸೌಧ ಕಟ್ಟಿದೆ. ಆದರೆ, ರಾಜ್ಯ ಮಟ್ಟದ ಇಲಾಖೆಗಳ ಕಚೇರಿಗಳು ಸ್ಥಳಾಂತರಗೊಂಡಿಲ್ಲ. ಸಚಿವರ ಇಲಾಖೆ ಕಚೇರಿಗಳು ಆರಂಭಗೊಂಡಿಲ್ಲ.ಇದರಿಂದಾಗಿ ಈ ಭಾಗದ ಜನರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂದರು.
ಈಗಾಗಲೇ ಸಂವಿಧಾನ ಬಾಹಿರವಾಗಿರುವ ಉಪಮುಖ್ಯಮಂತ್ರಿ ಸ್ಥಾನ ರದ್ದುಪಡಿಸುವಂತೆ ಆಗ್ರಹಿಸಲಾಗಿದೆ. ಒಂದು ವೇಳೆ ಸಂಪ್ರದಾಯ ಆಧಾರದ ಮೇಲೆ ಉಪಮುಖ್ಯಮಂತ್ರಿ ಸ್ಥಾನ ಮುಂದುವರಿಸುವುದಾರೆ ಉತ್ತರ ಕರ್ನಾಟಕ ಭಾಗದವರನ್ನು ಉಪಮುಖ್ಯಮಂತ್ರಿ ಗಳನ್ನಾಗಿ ಮಾಡಿ.ಇಲ್ಲದಿದ್ದರೆ ಸರ್ಕಾರ ವಿರುದ್ದ ಕಾನೂನು ಹೋರಾಟ ಮಾಡುವುದು ಅನಿವಾರ್ಯ ಆಗಲಿದೆ ಎಂದರು.