

ಬಾಗಲಕೋಟೆ: ನಗರದ ಸ್ಟೇಶನ್ ರಸ್ತೆಯಲ್ಲಿರುವ ಕುಮಟಗಿ ಬಿಲ್ಡಿಂಗ್‌ನಲ್ಲಿ ಸ್ಥಾಪಿಸಲಾಗಿರುವ ಪ್ರಗತಿ ಪತ್ತಿನ ಸೌಹಾರ್ದ ಸಹಕಾರಿ ಸಂಘಕ್ಕೆ ಶಾಸಕ ವೀರಣ್ಣ ಚರಂತಿಮಠ ಈಚೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದಿಂದ ಅನೇಕ ಕುಟುಂಬಗಳು ಆರ್ಥಿಕ, ಸಾಮಾಜಿಕವಾಗಿ ಬೆಳವಣಿಗೆ ಆಗಿವೆ. ಸಹಕಾರಿ ಕ್ಷೇತ್ರದಲ್ಲಿ ೪ ದಶಕಗಳಿಂದ ಅಪಾರ ಅನುಭವ ಹೊಂದಿರುವ ಬಸವೇಶ್ವರ ಬ್ಯಾಂಕಿನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಉದ್ಯಮಿ ಪವನ ಸಿಮಿಕೇರಿ ನೇತೃತ್ವದಲ್ಲಿ ಪ್ರಗತಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ಸ್ಥಾಪನೆಯಾಗಿದ್ದು, ಅಭಿವೃದ್ಧಿ ಹೊಂದಲಿ ಎಂದು ಆಶಿಸಿದರು.
ಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ ಗಣಕೀರಣ ವಿಭಾಗ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿ.ಪ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಬಸವರಾಜ ಅವರಾದಿ,ಪ್ರಗತಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಉಪಾಧ್ಯಕ್ಷ ಪವನ ಸಿಮಿಕೇರಿ ಹಾಗೂ ಬಸವೇಶ್ವರ ಬ್ಯಾಂಕ್ ನಿರ್ದೇಶಕರು, ಬವಿವಿ ಸಂಘದ ಸದಸ್ಯರು ಉಪಸ್ಥಿತರಿದ್ದರು.