ಬಿಜಿಎಸ್, ಶಂಭುಲಿಂಗೇಶ್ವರ ವಿದ್ಯಾಲಯ ಚಾಂಪಿಯನ್

16hgr.1.
ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಟ್ರೋಫಿ ಪಡೆದ ಆದಿಚುಂಚನಗಿರಿ ಮತ್ತು ಪಾಂಡವಪುರ ಕಾಲೇಜು ವಿದ್ಯಾರ್ಥಿಗಳು.
Published on

ಹಲಗೂರು : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಪಾಂಡವಪುರದ ಬಿಜಿಎಸ್ ಶಿಕ್ಷಣ ಮಹಾವಿದ್ಯಾಲಯ ಆದಿಚುಂಚನಗಿರಿ ಹಾಗೂ ಶ್ರೀ ಶಂಭುಲಿಂಗೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಕಾಲೇಜಿನ ವಿದ್ಯಾರ್ಥಿಗಳು ಪ್ರತ್ಯೇಕ ವಿಭಾಗಗಳಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಕ್ರೀಡಾ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಲಗೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಡ್ಯ ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಗೆ ಕಾಲೇಜಿನ ಪ್ರಾಂಶುಪಾಲ ಆಲಂಗೂರ್ ಮಂಜುನಾಥ್ ಚಾಲನೆ ನೀಡಿದರು.

ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಶ್ರೀನಿವಾಸ್ ಮಾತನಾಡಿ, ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಣದ ಜತೆ ಜತೆಗೆ ಕ್ರೀಡಾ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಕ್ರೀಡೆಗಳನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಂಡು ನಿಮ್ಮ ಮುಂದೆ ಇರುವ ಸವಾಲುಗಳನ್ನು ಎದುರಿಸಬೇಕು. ದೈಹಿಕ ಶಿಕ್ಷಣ ಉನ್ನತ ಶಿಕ್ಷಣದಷ್ಟೇ ಮುಖ್ಯ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಆಲಂಗೂರ್ ಮಂಜುನಾಥ್ ಮಾತನಾಡಿ, ನಮ್ಮ ಕ್ಷೇತ್ರದ ಶಾಸಕರು ಹಾಗೂ ನಮ್ಮ ಸರ್ಕಾರದ ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ಅವರು ಕಾಲೇಜಿನಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಕ್ರೀಡಾ ಚಟುವಟಿಕೆಗಳನ್ನು ಕಡ್ಡಾಯಗೊಳಿಸಬೇಕು. ಉನ್ನತ ಶಿಕ್ಷಣ ಇಲಾಖೆಯಲ್ಲಿ ಶೈಕ್ಷಣಿಕ ಅಂಕಿ ಅಂಶಗಳು ಹೇಗೆ ಹೆಚ್ಚಾಗುತ್ತಿದೆಯೋ ಹಾಗೆಯೇ ಕ್ರೀಡೆಯಲ್ಲಿ ಕೂಡ ಹೆಚ್ಚಿನ ಅಂಕಿ ಅಂಶಗಳು ಹೆಚ್ಚಾಗಬೇಕು ಎಂದು ಸಲಹೆ ನೀಡಿದರು.

ಪ್ರತಿಯೊಬ್ಬರ ವಿದ್ಯಾರ್ಥಿಯ ಜೀವನದಲ್ಲಿ ಕ್ರೀಡೆ ಪ್ರಮುಖ ಘಟ್ಟ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕ್ರೀಡೆಯ ಮೂಲಕ ಒಬ್ಬ ವಿದ್ಯಾರ್ಥಿ ಗ್ರಾಮೀಣ ಮಟ್ಟದಿಂದ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಯಶಸ್ವಿಯಾಗಲು ತುಂಬ ಅವಕಾಶಗಳಿವೆ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಗಳ ಜತೆ ಕಾಲೇಜಿನಲ್ಲಿ ನಡೆಸುವ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಭಾಗವಹಿಸಿದರೆ ಉತ್ತಮ ಆರೋಗ್ಯ ಪಡೆಯಬಹುದು ಎಂದು ತಿಳಿಸಿದರು.

ಹಲಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲ್ಲಾಜ ಬಾನು, ಉಪಾಧ್ಯಕ್ಷೆ ಲತಾ, ಸಮಾಜಸೇವಕರಾದ ಕುಂತೂರು ಗೋಪಾಲ್, ದೇವರಹಳ್ಳಿ ಕುಮಾರ್, ಜಿಪಂ ಮಾಜಿ ಸದಸ್ಯ ಚಂದ್ರಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಜಿ.ಎಸ್.ಮನೋಹರ್, ಮಂಡ್ಯ ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್, ಶಂಕ್ರೇಗೌಡ, ಡಾ. ಸೀಮಾ ಕೌಸರ್, ಪ್ರೊ. ಸುಧಾ ಬಿದರಿ, ತಾರಾ ಜಯಲಕ್ಷ್ಮೀ, ಗುರುಪ್ರಸಾದ್, ರವಿ, ಅಧೀಕ್ಷಕ ಕುಮಾರಸ್ವಾಮಿ, ಶಿವರಾಂ, ಉಮೇಶ್, ರಘು, ಕನ್ನಡ ಮೂರ್ತಿ ಗಿರೀಶ್, ರವಿ, ಅನಸೂಯಾ, ಶ್ರೀಧರ್, ಗ್ರಂಥಪಾಲಕ ಕೃಷ್ಣಪ್ಪ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net