ಬಿಜಿಎಸ್ ಆಂಗ್ಲ ಶಾಲೆಯಲ್ಲಿ ಸಾಂಸ್ಕೃತಿಕ, ಸಾಂಪ್ರದಾಯಿಕ ದಿನ

24cbp1
Published on

ಚಿಕ್ಕಬಳ್ಳಾಪುರ: ವಿವಿಧ ಉಡುಗೆ ತೊಡುಗೆಗಳು, ಮನರಂಜನೆಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಬಾಯಲ್ಲಿ ನೀರೂರಿಸುವ ಸಿಹಿ ತಿನಿಸುಗಳು, ಪೈಪೋಟಿಯ ಸ್ಪರ್ಧೆಗಳು.

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯ ಬಿಜಿಎಸ್ ಆಂಗ್ಲ ಶಾಲೆಯಲ್ಲಿ ಕೈಗೊಂಡಿದ್ದ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ದಿನ ಆಚರಣೆಯಲ್ಲಿ ಕಂಡು ಬಂದ ದೃಶ್ಯ. ತಮಟೆ ಬಾರಿಸುವ ಮೂಲಕ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮುನಿವೆಂಕಟಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ದೇಶದಲ್ಲಿ ನಶಿಸಿಹೋಗುತ್ತಿರುವ ಸಂಸ್ಕೃತಿ, ಕಲೆ, ಪರಂಪರೆಯನ್ನು ಹೆಚ್ಚಿಗೆ ಮಕ್ಕಳಿಗೆ ಪರಿಚಯಿಸಬೇಕು ಎಂದು ಸಲಹೆ ನೀಡಿದರು.

ಚಿಕ್ಕ ವಯಸ್ಸಿನಿಂದಲೇ ಮಕ್ಕಳಲ್ಲಿ ಗುರು ಹಿರಿಯರನ್ನು ಗೌರವಿಸುವ ಮನೋಭಾವನೆಯನ್ನು ಬೆಳೆಸಬೇಕು. ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಬೇಕು ಎಂದರು.

ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಎನ್.ಶಿವರಾಮರೆಡ್ಡಿ ಮಾತನಾಡಿ, ಮಕ್ಕಳಿಗೆ ದೇಶದ ಸಂಸ್ಕೃತಿ, ಕಲೆ, ಪರಂಪರೆಯ ಚಟುವಟಿಕೆಯ ಬಗ್ಗೆ ಪರಿಚಯಿಸಬೇಕು. ಈ ನಿಟ್ಟಿನಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಗಳಲ್ಲಿ ಕ್ರಿಯಾಶೀಲ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ ಎಂದರು.

ಶಾಲಾ ಮುಖ್ಯ ಶಿಕ್ಷಕ ಡಿ.ಸಿ.ಮೋಹನ್ ಕುಮಾರ್ ಮಾತನಾಡಿ, ವಿವಿಧ ರಾಜ್ಯಗಳ ಉಡುಗೆ ತೊಡುಗೆ ಮತ್ತು ಆಹಾರಪದ್ದತಿ, ಚಟುವಟಿಕೆಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದೇ ಸಾಂಪ್ರದಾಯಿಕ ದಿನದ ಮುಖ್ಯ ಉದ್ದೇಶ ಎಂದರು.

ವಿದ್ಯಾರ್ಥಿಗಳು ಸಾಂಪ್ರದಾಯಿಕ ವೈವಿಧ್ಯತೆಯನ್ನು ಬಿಂಬಿಸುವ ಎಲ್ಲ ಧರ್ಮಗಳ ಹಬ್ಬಗಳನ್ನು ಆಚರಿಸಲಾಯಿತು. ಹಾಗೆಯೇ ದೇಶದ ಸಂಸ್ಕೃತಿಯನ್ನು ಬಿಂಬಿಸುವ ಹಾಡುಗಳಿಗೆ ನೃತ್ಯವನ್ನು ಮಕ್ಕಳನ್ನು ರಂಜಿಸಿದರು.

ಕಾರ್ಯಕ್ರಮದಲ್ಲಿ ಬಿಜಿಎಸ್ ಇಂಗ್ಲೀಷ್ ಸ್ಕೂಲ್ ಶೈಕ್ಷಣಿಕ ಸಲಹೆಗಾರ ಎಸ್.ವೆಂಕಟೇಶಪ್ಪ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net