

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆಯ ಉಪ ಪ್ರಧಾನ ವ್ಯವಸ್ಥಾಪಕ ಬಿ.ಎಚ್.ದೀಪಕ್ ಅವರು ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದಿಂದ ಡಿಲಿಟ್ ಪದವಿ ಪಡೆದಿದ್ದಾರೆ.
‘ಯಕ್ಷಗಾನ ಕ್ಷೇತ್ರದ ಆರ್ಥಿಕ ಸ್ಥಿತಿಗತಿಗಳ ಮೌಲ್ಯೀಕರಣ’ ಎನ್ನುವ ವಿಷಯ ಕುರಿತು ದೀಪಕ್ ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯವು ಡಿ.ಲಿಟ್ ಪದವಿ ಘೋಷಣೆ ಮಾಡಿದೆ.