ಭದ್ರೆಗೆ ನಯಾ ಪೈಸೆ ಬಂದಿಲ್ಲ

SIDDARAMAIAH cm
Published on

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ರೂ. ಘೋಷಿಸಿ 6 ತಿಂಗಳಾದರೂ ನಯಾಪೈಸೆ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಚಿತ್ರದುರ್ಗದಲ್ಲಿ ಶುಕ್ರವಾರ ಮಾತನಾಡಿ, ಈ ಸಂಬಂಧ ಕೂಡಲೇ ಬಿಡುಗಡೆಗೆ ಮನವಿ ಮಾಡಿದ್ದೇವೆ. ನೀರಾವರಿ ಯೋಜನೆಗಳಿಗೆ ಒತ್ತು ನೀಡಲಿದ್ದೇವೆ. ರಾಜ್ಯ ಸರ್ಕಾರ ಈ ವರ್ಷ 200 ಕೋಟಿ ರೂ. ನೀಡಲಿದ್ದು, ಹಂತ-ಹಂತವಾಗಿ ಹಣ ಬಿಡುಗಡೆಗೊಳಿಸಲಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net