ಬೊಮ್ಮಂಜಿಕೇರಿ ಶ್ರೀ ಭದ್ರಕಾಳಿದೇವಿ ವಾರ್ಷಿಕ ಉತ್ಸವ ಸಂಪನ್ನ

18--npk-2
ಕೊಳಕೇರಿ ಗ್ರಾಮದ ಬೊಮ್ಮಂಜಿಕೇರಿ ಶ್ರೀ ಭದ್ರಕಾಳಿ ದೇವಿಯ ವಾರ್ಷಿಕ ಉತ್ಸವ.
Published on

ನಾಪೋಕ್ಲು: ಕೊಳಕೇರಿ ಗ್ರಾಮದ ಬೊಮ್ಮಂಜಿಕೇರಿ ಶ್ರೀ ಭದ್ರಕಾಳಿ ದೇವಿಯ ವಾರ್ಷಿಕ ಉತ್ಸವ ಎರಡು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಿತು. ಪೂದ ಮತ್ತು ಭದ್ರಕಾಳಿ ತೆರೆ ನಡೆದು ಸೋಮವಾರ ವಾರ್ಷಿಕ ಉತ್ಸವ ಸಂಪನ್ನಗೊಂಡಿತು. ದೇವರ ಉತ್ಸವದಲ್ಲಿ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಇಷ್ಟಾರ್ಥ ಹರಕೆ ಕಾಣಿಕೆ ಒಪ್ಪಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಾಲಯದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net