ಭದ್ರಾವತಿಯಲ್ಲಿ ಶಾಂತಿ ಕದಡಲು ಯತ್ನ: ಸುಂದರೇಶ್ ಆರೋಪ

Sundresh (7) (1)
Published on

ಶಿವಮೊಗ್ಗ: ಕಬಡ್ಡಿ ಪಂದ್ಯಾವಳಿ ವೇಳೆ ನಡೆದಿದ್ದ ಗಲಾಟೆ ಬಳಿಕ ಈಗ ಭದ್ರಾವತಿ ಶಾಂತವಾಗುತ್ತಿದೆ. ಆದರೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭದ್ರಾವತಿಗೆ ಭೇಟಿ ನೀಡಿ ಪ್ರಚೋದನಾಕಾರಿಯಾಗಿ ಮಾತನಾಡುವ ಮೂಲಕ ಮತ್ತೆ ವೈಮನಸ್ಸು ಹೆಚ್ಚುವಂತೆ ಮಾಡಿದ್ದಾರೆ. ಶಾಂತಿ ಕದಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಆರೋಪಿಸಿದರು.
ನಾವು ಮಾ.13ರಂದು ಶಿವಮೊಗ್ಗದಲ್ಲಿ ಜನಾಕ್ರೋಶ ಸಮಾವೇಶ ನಡೆಸಿದರೂ ಭದ್ರಾವತಿಯಲ್ಲಿ ರಾಜಕೀಯ ದ್ವೇಷ ಬಿತ್ತುವ ಕೆಲಸ ಮಾಡಲಿಲ್ಲ. ಆದರೆ ಈಗ ಬಿಜೆಪಿ ಮುಖಂಡರು ಈ ರೀತಿಯ ವರ್ತನೆ ತೋರುತ್ತಿರುವುದು ಆಕ್ಷೇಪಾರ್ಹ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಬಡ್ಡಿ ಪಂದ್ಯಾವಳಿ ಗಲಾಟೆಗೆ ಸಂಬಂಧಿಸಿ ಶಾಸಕ ಸಂಗಮೇಶ್ವರ ಕುಟುಂಬದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅವರ ಪುತ್ರನನ್ನು ಬಂಧಿಸಿದ್ದಾರೆ. ಆದರೆ ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನನ್ವಯ ಬಿಜೆಪಿ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳದೆ ಪೊಲೀಸರು ಪಕ್ಷಪಾತ ನೀತಿ ಅನುಸರಿಸಿದ್ದಾರೆ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net