ಭಾಗಮ್ಮದೇವಿ ಜಾತ್ರೆ

Published on

ತಾಳಿಕೋಟೆ: ಪಟ್ಟಣದ ಹಡಗಿನಾಳ ರಸ್ತೆಯಲ್ಲಿರುವ ಶ್ರೀ ಭಾಗಮ್ಮದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ ಶುಕ್ರವಾರ ನಡೆಯಲಿದೆ.

ನಸುಕಿನ ಜಾವ ಭಾಗಮ್ಮದೇವಿ ಮಹಾ ಮೂರ್ತಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಮಹಾ ಮಂಗಳಾರತಿ ಕಾರ್ಯಕ್ರಮಗಳು ನಡೆಯಲಿವೆ. ನಂತರ ಸುಮಂಗಲೆಯರ ಕುಂಭ ಮೇಳದೊಂದಿಗೆ ಭೀಮನಭಾವಿಯಲ್ಲಿ ಗಂಗಸ್ಥಳ ಕಾರ್ಯಕ್ರಮ ನಡೆಯಲಿದೆ. ನಂತರ ಅಲ್ಲಿಂದ ಭಾಗಮ್ಮದೇವಿಯ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ ಎಂದು ದೇವಸ್ಥಾನದ ಅರ್ಚಕ ಶಂಕರ ಸೋನೋನೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net