ಭಾಗವತ ಕೇಶವ ಹೆಗಡೆ ಕೊಳಗಿಗೆ ಸನ್ಮಾನ

SDP2 SANMAN
Published on

ಸಿದ್ದಾಪುರ: ತಾಲೂಕು ಕಸಾಪದಿಂದ ಸಾಧಕರ ಮನೆಗೆ ಸಾಹಿತ್ಯ ಪರಿಷತ್ ಕಾರ್ಯಕ್ರಮದಡಿ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಭಾಗವತ ಕೇಶವ ಹೆಗಡೆ ಕೊಳಗಿ ಅವರ ಮನೆಗೆ ಬುಧವಾರ ತೆರಳಿ ಭಾಗವತ ಕೇಶವ ಹೆಗಡೆ ಕೊಳಗಿ ದಂಪತಿಯನ್ನು ಗೌರವಿಸಲಾಯಿತು.

ಕಸಾಪ ತಾಲೂಕಾಧ್ಯಕ್ಷ ಗೋಪಾಲ ನಾಯ್ಕ ಭಾಶಿ, ಪ್ರಾಚಾರ್ಯ ಎಂ.ಕೆ. ನಾಯ್ಕ ಹೊಸಳ್ಳಿ, ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಗಂಗಾಧರ ಕೊಳಗಿ, ಸಾಹಿತಿ ಜಿ.ಜಿ. ಹೆಗಡೆ ಬಾಳಗೋಡ, ಉಪನ್ಯಾಸಕ ರತ್ನಾಕರ ನಾಯ್ಕ, ಇತರರು ಮಾತನಾಡಿ ಕನ್ನಡ ಭಾಷೆಯ ಉಳಿವಿಗೆ ಯಕ್ಷಗಾನ ಕಲಾವಿದರ ಕೊಡುಗೆ ಅಪಾರವಾದದ್ದು. ಕೇಶವ ಹೆಗಡೆ ಕೊಳಗಿ ಅವರು 40 ವರ್ಷದಿಂದ ಯಕ್ಷಗಾನ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ ಎಂದರು.

ಕೇಶವ ಹೆಗಡೆ ಕೊಳಗಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಕಸಾಪ ತಾಲೂಕು ಕೋಶಾಧ್ಯಕ್ಷ ಪಿ.ಬಿ. ಹೊಸೂರು, ಕಾರ್ಯದರ್ಶಿ ಅಣ್ಣಪ್ಪ ನಾಯ್ಕ ಶಿರಳಗಿ, ಪ್ರಶಾಂತ ಶೇಟ್ ಹಾಳದಕಟ್ಟಾ, ನಿವೃತ್ತ ನೌಕರರ ಸಂಘದ ತಾಲೂಕಾಧ್ಯಕ್ಷ ಸಿ.ಎಸ್. ಗೌಡರ್, ಚಂದ್ರಶೇಖರ ಕುಂಬ್ರಿಗದ್ದೆ, ಪ್ರಶಾಂತ ಹೆಗಡೆ ಕಾಶಿಗದ್ದೆ, ರತ್ನಾಕರ ಪಾಲೇಕರ್, ಸುಧಾರಾಣಿ ನಾಯ್ಕ, ಸುಜಾತಾ ಹೆಗಡೆ ದಂಟಕಲ್, ಕು.ಧನ್ಯಾ ಪಾಲನಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net