ಕಾಂಗ್ರೆಸ್​ನಲ್ಲಿ ದೊಡ್ಡ ಒಳಜಗಳವಿದೆ, ಡಿಕೆಶಿಯನ್ನು ಕಂಡರೆ ಸಿದ್ದರಾಮಯ್ಯ ಅವರಿಗೆ ಆಗಲ್ಲ: ಕೇಂದ್ರ ಸಚಿವ ಭಗವಂತ ಖೂಬಾ

DKS
Published on

ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದು ಅವರ ಪಕ್ಷದವರೇ ಆದ ಸಲೀಂ ಹಾಗೂ ಉಗ್ರಪ್ಪ ಬಹಿರಂಗವಾಗಿ ಹೇಳಿಕೊಂಡಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ವ್ಯಾಪಕ ಟೀಕೆಗೂ ಗುರಿಯಾಗಿದೆ.

ಈ ಸಂಬಂಧ ಇದೀಗ ಕೇಂದ್ರ ಸಚಿವ ಭಗವಂತ ಖೂಬಾ ಅವರು ಚಿತ್ರದುರ್ಗದಲ್ಲಿ ಮಾತನಾಡಿದ್ದಾರೆ. ಕಾಂಗ್ರೆಸ್​​ನ ಸಲೀಂ ಹಾಗೂ ಉಗ್ರಪ್ಪ ಅವರಿಗೆ ಈಗ ಜ್ಞಾನೋದಯ ಆಗಿದೆ. ಸತ್ಯಾಸತ್ಯತೆಯನ್ನು ತಡವಾಗಿಯಾದರೂ ಬಾಯಿಬಿಟ್ಟಿದ್ದಾರೆ. ಆದರೆ ಅವರು ಕಾಂಗ್ರೆಸ್​ ಭ್ರಷ್ಟಾಚಾರದ ಇಷ್ಟು ದಿನ ಮುಚ್ಚಿಟ್ಟಿದ್ದೇಕೆ ಎಂದು ಹೇಳಬೇಕು ಎಂಬುದಾಗಿ ಭಗವಂತ ಖೂಬಾ ಆಗ್ರಹಿಸಿದ್ದಾರೆ.

ಈ ಸಂಬಂಧ ಮತ್ತಷ್ಟು ವಿಚಾರಗಳನ್ನು ಹಂಚಿಕೊಂಡಿರುವ ಅವರು, ಕಾಂಗ್ರೆಸ್​​ನಲ್ಲಿ ದೊಡ್ಡ ಪ್ರಮಾಣದಲ್ಲಿ ಒಳಜಗಳ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕಂಡರೆ ಸಿದ್ದರಾಮಯ್ಯ ಅವರಿಗೆ ಆಗುವುದಿಲ್ಲ ಎಂಬದನ್ನೂ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net