ಭಗಿನಿ ಶಾಲೆಯಲ್ಲಿ ಸ್ನೇಹ ಸಮ್ಮಿಲನ,  ಅನುಭವ ಹಂಚಿಕೊಂಡ ಹಳೇ ವಿದ್ಯಾರ್ಥಿಗಳು

IMG-20241226-WA0030.jpg
Published on

ಹುಬ್ಬಳ್ಳಿ: ಇಲ್ಲಿಯ ನವನಗರದ ಭಗಿನಿ ನಿವೇದಿತಾ ವಿದ್ಯಾಲಯದಲ್ಲಿ ಪೂರ್ವ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ ಬುಧವಾರ ಸಂಭ್ರಮದಿಂದ ನಡೆಯಿತು.

ಆರ್ ಎಸ್ ಎಸ್ ಪ್ರಾಂತ ಪ್ರಚಾರಕ ನರೇಂದ್ರ ಮಾತನಾಡಿ, ಭಗಿನಿ ನಿವೇದಿತಾ ಶಾಲೆಯಲ್ಲಿ ಕಲಿತ ಹಲವು ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಿದ್ದಾರೆ, ಉದ್ಯೋಗದಲ್ಲಿದ್ದಾರೆ. ಹಳೇ ವಿದ್ಯಾರ್ಥಿಗಳು ಒಂದೆಡೆ ಸೇರುವ ಮೂಲಕ ಈಗಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ ಎಂದರು.

ಶಾಲೆಯನ್ನು ಕಟ್ಟಿ ಬೆಳಸಿದ ಶಿಕ್ಷಕರನ್ನು ಸ್ಮರಿಸುವ ದಿನ ಇದಾಗಿದೆ. ಶಿಕ್ಷಣದ ಜತೆಗೆ ಸಂಸ್ಕಾರವನ್ನು ಕೊಡುವುದು ಬಹಳ ಮಹತ್ವದ್ದಾಗಿದೆ. ಅಂತಹ ಕೆಲಸ ಇಲ್ಲಿ ಪ್ರಾಮಾಣಿಕವಾಗಿ ನಡೆಯುತ್ತಿದೆ ಎಂದರು.

ಶಾಲಾ ಸುಧಾರಣೆ ಸಮಿತಿ ಅಧ್ಯಕ್ಷ ಜಿ.ಜಿ. ಹೆಗಡೆ, ಆರ್ ಎಸ್ ಎಸ್ ಪ್ರಾಂತ ಕಾರ್ಯಕಾರಿಣಿ ಸದಸ್ಯ ಶ್ರೀಧರ ನಾಡಗೀರ, ಶಾಲಾ ಸುಧಾರಣೆ ಸಮಿತಿಯ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಉಪಸ್ಥಿತರಿದ್ದರು.

ಹಳೇ ವಿದ್ಯಾರ್ಥಿಗಳಾದ ಸಚಿನ ಪಾಟೀಲ್, ಅಭಿಷೇಕ, ಪ್ರೀತಿ ಶಿಂಪಿ, ವಿನೋದ, ಪ್ರಶಾಂತ, ಶಿವಕುಮಾರ, ನವೀನ, ವಿನಾಯಕ ಪತಂಗೆ ಹಾಗೂ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net