ಭಾಗ್ಯಲಕ್ಷ್ಮಿ ಲಾನುಭವಿಗಳಿಗೆ ಸೂಚನೆ

Bhagyalakshmi bond
Published on

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಭಾಗ್ಯಲಕ್ಷ್ಮೀ ಯೋಜನೆಯ 2006-07ನೇ ಸಾಲಿನ ಲಾನುಭವಿಗಳು ಯೋಜನೆ ಸೌಲಭ್ಯ ಪಡೆಯಲು ಸೂಚಿಸಲಾಗಿದೆ.

ಯೋಜನೆಯಡಿ 2006-07ನೇ ಸಾಲಿನಲ್ಲಿ ಒಟ್ಟು 1,527 ಲಾನುಭವಿಗಳು ನೋಂದಣಿಯಾಗಿದ್ದು, ಇವರ ವಯಸ್ಸು 18 ವರ್ಷ ಪೂರ್ಣಗೊಂಡಿರುವುದರಿಂದ ಎಲ್.ಐ.ಸಿ.ಯಿಂದ ಪರಿಪಕ್ವ ಮೊತ್ತ ಮಂಜೂರಾಗಿದ್ದು, ಅರ್ಹ ಲಾನುಭವಿಗಳು ವಿವರಗಳಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರಳನ್ನು ಹಾಗೂ ಎನ್.ಆರ್. ಕಾಲೊನಿಯ ಬೆಂಗಳೂರು ರಾಜ್ಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಭೇಟಿ ನೀಡಿ ಇಲ್ಲವೆ ದೂ: 080-26601917 ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net