ಹೊಲದಲ್ಲಿ ಕಳೆ ಕೀಳುತ್ತಿದ್ದ ಮಹಿಳೆಯರಿಗೆ ಬಡಿದ ಸಿಡಿಲು, ಸಿರಗುಪ್ಪದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

201020 Bhairapura Sidilu Two Death
Published on

ಸಿರಗುಪ್ಪ: ತಾಲೂಕಿನ ಬೈರಾಪುರ ಗ್ರಾಮದಲ್ಲಿ ಮಂಗಳವಾರ ಸಿಡಿಲಿ ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಗ್ರಾಮದ ಕವಿತಾ(32), ಗಂಗಮ್ಮ(45) ಮೃತರು. ಮೆಣಸಿನಕಾಯಿ ಹೊಲದಲ್ಲಿ ಕಳೆ ಕೀಳಲು ಹೋದಾಗ ಸಿಡಿಲು ಬಡಿದಿದೆ. ಈ ಕುರಿತು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಶಾಸಕ ಎಂ.ಎಸ್.ಸೋಮಲಿಂಗಪ್ಪ, ಕಂದಾಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net